SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.

| Updated By: ಝಾಹಿರ್ ಯೂಸುಫ್

Updated on: Aug 16, 2022 | 8:00 AM

SSC JE Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
SSC JE Recruitment 2022
Follow us on

SSC JE Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜೂನಿಯರ್ ಇಂಜಿನಿಯರ್ (SSC JE Recruitment 2022) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SSC JE Recruitment 2022- ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರ್ ಪದವಿ ಮಾಡಿಬೇಕು. ಹಾಗೆಯೇ ಆಯಾ ವಿಭಾಗಕ್ಕೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

SSC JE Recruitment 2022- ಅರ್ಜಿ ಶುಲ್ಕ:
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ- 100 ರೂ.
ಸ್ತ್ರೀ/SC/ST/PH/ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

SSC JE Recruitment 2022- ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 35400 ರಿಂದ 1,12400 ರೂ. ವೇತನ ನೀಡಲಾಗುತ್ತದೆ.

SSC JE Recruitment 2022- ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಪರೀಕ್ಷೆ
  • ಸಾಂಪ್ರದಾಯಿಕ ಮಾದರಿಯ ಲಿಖಿತ ಪರೀಕ್ಷೆಯ
  • ದಾಖಲೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

SSC JE Recruitment 2022- ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 2, 2022

SSC JE Recruitment 2022- ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.