AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC Recruitment 2025: 10ನೇ ತರಗತಿ ಪಾಸಾದ ನಂತರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ

ಸಿಬ್ಬಂದಿ ಆಯ್ಕೆ ಆಯೋಗ (SSC) ಶೀಘ್ರದಲ್ಲೇ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ಮತ್ತು ಇತರ ಅರ್ಹತಾ ಮಾಹಿತಿಯನ್ನು SSC ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪರೀಕ್ಷೆಯು ಸೆಪ್ಟೆಂಬರ್​​​ನಲ್ಲಿ ನಡೆಯಲಿದೆ.

SSC Recruitment 2025: 10ನೇ ತರಗತಿ ಪಾಸಾದ ನಂತರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ
Ssc Mts And Havildar Recruitment 2025 Apply Online Now!
ಅಕ್ಷತಾ ವರ್ಕಾಡಿ
|

Updated on:Jun 26, 2025 | 2:56 PM

Share

10ನೇ ತರಗತಿ ಪಾಸಾದ ನಂತರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಒಂದು ಉಪಯುಕ್ತ ಸುದ್ದಿ ಇಲ್ಲಿದೆ. ಸಿಬ್ಬಂದಿ ಆಯ್ಕೆ ಆಯೋಗವು ಮಲ್ಟಿ ಟಾಸ್ಕಿಂಗ್ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ ಮತ್ತು ಸಿಬಿಎನ್) ನೇಮಕಾತಿ 2025 ರ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಕಿರು ಅಧಿಸೂಚನೆಯನ್ನು ಹೊರಡಿಸಿದೆ. ಬಿಡುಗಡೆಯಾದ ನಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆಯೋಗದ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಮಾಧ್ಯಮ ವರದಿಗಳ ಪ್ರಕಾರ, ಈ ನೇಮಕಾತಿಗಾಗಿ ಜಾಹೀರಾತನ್ನು ಈ ತಿಂಗಳ ಅಂತ್ಯದ ವೇಳೆಗೆ ಅಥವಾ ಜುಲೈ ಮೊದಲ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಅರ್ಜಿ ಪ್ರಕ್ರಿಯೆಯು ಜುಲೈ 24 ರಂದು ಅಥವಾ ಅದಕ್ಕೂ ಮೊದಲು ಪ್ರಾರಂಭವಾಗುವ ನಿರೀಕ್ಷೆಯಿದೆ. ಆಯೋಗವು ಈ ಹಿಂದೆ ಬಿಡುಗಡೆ ಮಾಡಿದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ, SSC MTS ಪರೀಕ್ಷೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 24 ರವರೆಗೆ ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲಿದೆ.

SSC MTS ನೇಮಕಾತಿ ಅರ್ಹತೆ:

SSC MTS-ಹವಿಲ್ದಾರ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. CBN ನಲ್ಲಿ MTS ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು. CBIC ಯಲ್ಲಿ ಹವಿಲ್ದಾರ್ ಹುದ್ದೆಗಳಿಗೆ, ಅಭ್ಯರ್ಥಿಯ ವಯಸ್ಸು 18 ರಿಂದ 27 ವರ್ಷಗಳ ನಡುವೆ ಇರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: SBI ಬ್ಯಾಂಕಿನಲ್ಲಿ ಕೆಲಸ ಪಡೆಯಲು ಸುವರ್ಣ ಅವಕಾಶ, 2600 ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • SSC ಯ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ Apply ಟ್ಯಾಬ್‌ ಮೇಲೆ ಕ್ಲಿಕ್​ ಮಾಡಿ.
  • SSC MTS-ಹವಿಲ್ದಾರ್ ಅರ್ಜಿ ಸಲ್ಲಿಸಲು ಇಲ್ಲಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಈಗಲೇ ನೋಂದಾಯಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ.

ಕಳೆದ ಬಾರಿ ಎಷ್ಟು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು?

2024 ರಲ್ಲಿ, SSC MTS (ಮಲ್ಟಿ-ಟಾಸ್ಕಿಂಗ್ ಸ್ಟಾಫ್) ಮತ್ತು ಹವಿಲ್ದಾರ್ ನ ಒಟ್ಟು 11,518 ಹುದ್ದೆಗಳಿಗೆ ನೇಮಕಾತಿ ನಡೆಸಲಾಯಿತು. ಇವುಗಳಲ್ಲಿ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ನ 8,079 ಹುದ್ದೆಗಳು, CBIC ಮತ್ತು CBN ನಲ್ಲಿ 3,439 ಹವಿಲ್ದಾರ್ ಹುದ್ದೆಗಳು ಸೇರಿವೆ. CBT ಪರೀಕ್ಷೆ, PET ಮತ್ತು PST ಮೂಲಕ ಆಯ್ಕೆಯನ್ನು ಮಾಡಲಾಯಿತು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಗುಣಮಟ್ಟ ಪರೀಕ್ಷೆಗೆ ಆಯ್ಕೆಯಾಗುತ್ತಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 26 June 25

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?