SSC Recruitment 2023: ಎಸ್​ಎಸ್​ಸಿ ನೇಮಕಾತಿ: 1558 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 02, 2023 | 2:19 PM

SSC MTS, Havaldar Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

SSC Recruitment 2023: ಎಸ್​ಎಸ್​ಸಿ ನೇಮಕಾತಿ: 1558 ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2023
Follow us on

Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1558 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರಗಳು:

  • MTS- 1198 ಹುದ್ದೆಗಳು
  • ಹವಾಲ್ದಾರ್ (CBIC – CBN)- 360 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 1558

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.

ವಯೋಮಿತಿ;

MTS ಮತ್ತು ಹವಾಲ್ದಾರ್‌ (CBN) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು.
ಹವಾಲ್ದಾರ್ (CBIC) ಹುದ್ದೆಗಳಿಗೆ 18 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 100 ರೂ. ನಿಗದಿ ಮಾಡಲಾಗಿದೆ. ಇದಾಗ್ಯೂ ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾಗಿರುವ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST), ವಿಕಲಚೇತನರು (PwBD) ಮತ್ತು ಮಾಜಿ ಸೈನಿಕರು (ESM) ಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 21/07/2023 (ರಾತ್ರಿ 11 ಗಂಟೆ).

ಇದನ್ನೂ ಓದಿ: Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಎಸ್​ಎಸ್​ಸಿಯ ಅಧಿಕೃತ ವೆಬ್​ಸೈಟ್ ssc.nic.in ​ಗೆ ಭೇಟಿ ನೀಡುವ ಮೂಲಕ ಆನ್​ಲೈನ್​ನಲ್ಲೇ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.