Delhi Police Recruitment 2022: ದೆಹಲಿ ಪೊಲೀಸ್ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 81 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Jul 09, 2022 | 4:05 PM

SSC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Delhi Police Recruitment 2022: ದೆಹಲಿ ಪೊಲೀಸ್ ಕಾನ್ಸ್​ಟೇಬಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 81 ಸಾವಿರ ರೂ.
Delhi Police Recruitment 2022
Follow us on

SSC Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ದೆಹಲಿ ಪೊಲೀಸ್‌ನಲ್ಲಿನ ಸಹಾಯಕ ವೈರ್‌ಲೆಸ್ ಆಪರೇಟರ್ (ಎಡಬ್ಲ್ಯೂಒ) / ಟೆಲಿ-ಪ್ರಿಂಟರ್ ಆಪರೇಟರ್ (ಟಿಪಿಒ) ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 2268

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಅರ್ಹತಾ ಮಾನದಂಡಗಳು:

ಹೆಡ್ ಕಾನ್ಸ್​ಟೇಬಲ್​ ಹುದ್ದೆ (AWO/TPO)- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿಷಯದೊಂದಿಗೆ 12ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಮೆಕ್ಯಾನಿಕ್-ಕಮ್-ಆಪರೇಟರ್ (ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಸಿಸ್ಟಮ್) ನ ಪ್ರಮಾಣಪತ್ರವನ್ನು ಹೊಂದಿರಬೇಕು. ಅಲ್ಲದೆ ಕಂಪ್ಯೂಟರ್ ಕಾರ್ಯಾಚರಣೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
ಕಾನ್ಸ್​ಟೇಬಲ್​ (ಚಾಲಕ) – ಅಭ್ಯರ್ಥಿಗಳು ಹೆವಿ ಮೋಟಾರು ವಾಹನ ಪರವಾನಗಿಯೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 12 ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಕಾರು ನಿರ್ವಹಣೆಯ ಬಗ್ಗೆ ಜ್ಞಾನ ಹೊಂದಿರಬೇಕು,

ವಯೋಮಿತಿ:
18 ರಿಂದ 27 ವರ್ಷಗಳ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಈ ನೇಮಕಾತಿಗಾಗಿ ಅರ್ಜಿ ಶುಲ್ಕ ರೂ. 100/- ಪಾವತಿಸಬೇಕಾಗುತ್ತದೆ.

ವೇತನ:
ಹೆಡ್ ಕಾನ್‌ಸ್ಟೆಬಲ್ (AWO/TPO)- 25500 ರಿಂದ 81100 ರೂ.
ಕಾನ್‌ಸ್ಟೆಬಲ್ (ಚಾಲಕ)- 21700 ರಿಂದ 69100 ರೂ.

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 29, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.