SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 5ನೇ ತಾರೀಕಿಂದ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ.

SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on:Oct 05, 2021 | 1:22 PM

ಪ್ರೊಬೆಷನರಿ ಅಧಿಕಾರಿಗಳ (POs) ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಭಾರತದ ಅತಿದೊಡ್ಡ ಬ್ಯಾಂಕ್​ ಆದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದಿಂದ 2056 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯು ಮೂರು ಹಂತದಲ್ಲಿ ನಡೆಯುತ್ತದೆ. ಅರ್ಹ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಬ್ಯಾಂಕ್​ನ ವೆಬ್​ಸೈಟ್​ಗೆ ಭೇಟಿ ನೀಡಬೇಕು ಮತ್ತು ನೇಮಕಾತಿ ಜಾಹೀರಾತನ್ನು ಒಮ್ಮೆ ಸಂಪೂರ್ಣ ಪರಿಶೀಲಿಸಬೇಕು. ಆ ನಿರ್ದಿಷ್ಟ ದಿನಾಂಕಕ್ಕೆ ಎಲ್ಲ ಅರ್ಹತಾ ಮಾನದಂಡಗಳನ್ನು ಪೂರ್ತಿ ಮಾಡುತ್ತಾರೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳುವುದಕ್ಕೆ ಇದು ಅತ್ಯಗತ್ಯ.

ಅಪ್ಲೈ ಮಾಡುವುದು ಹೇಗೆ? – ಅಕ್ಟೋಬರ್​ 5ನೇ ತಾರೀಕಿನಿಂದ 25ನೇ ತಾರೀಕಿನವರೆಗೆ ಆನ್​ಲೈನ್​ನಲ್ಲಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯ. ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸ್ವೀಕರಿಸುವುದಿಲ್ಲ. – ಬ್ಯಾಂಕ್​ನ “Career” ವೆಬ್​ಸೈಟ್​ನ ಮೂಲಕವಾಗಿ – https://bank.sbi/careers ಅಥವಾ https://www.sbi.co.in/careers – ನೋಂದಣಿ ಮಾಡಿಕೊಳ್ಳಬೇಕು. – ನೋಂದಣಿಯ ನಂತರ ಅಗತ್ಯ ಪ್ರಮಾಣದ ಅರ್ಜಿ ಶುಲ್ಕವನ್ನು ಆನ್​ಲೈನ್ ಮೂಲಕವಾಗಿ ಡೆಬಿಟ್​ ಕಾರ್ಡ್/ಕ್ರೆಡಿಟ್ ಕಾರ್ಡ್​/ಇಂಟರ್​ನೆಟ್​ ಬ್ಯಾಂಕಿಂಗ್ ಮೂಲಕವಾಗಿ ಪಾವತಿಸಬಹುದು.

ಅಗತ್ಯ ಶೈಕ್ಷಣಿಕ ಅರ್ಹತೆ – ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮಾನವಾದ ಶಿಕ್ಷಣ ಪಡೆದಿರಬೇಕು. – ಪದವಿ ಅಂತಿಮ ವರ್ಷದ/ಸೆಮಿಸ್ಟರ್​ನಲ್ಲಿ ಇರುವವರು ಸಹ ಅರ್ಜಿ ಸಲ್ಲಿಸಬಹುದು. ಆದರೆ ಷರತ್ತುಗಳು ಅನ್ವಯಿಸುತ್ತದೆ. ಸಂದರ್ಶನಕ್ಕೆ ಕರೆಯುವ ಸಮಯದಲ್ಲಿ ಪದವಿ ಪರೀಕ್ಷೆ ಪೂರ್ಣಗೊಳಿಸಿದ ಪುರಾವೆಯನ್ನು ಡಿಸೆಂಬರ್ 31, 2021ರಂದು ಅಥವಾ ಅದಕ್ಕೂ ಮುನ್ನ ಸಲ್ಲಿಕೆ ಮಾಡಬೇಕು. – ಇಂಟಿಗ್ರೇಟೆಡ್​ ಡ್ಯುಯಲ್ ಡಿಗ್ರಿ (IDD) ಪದವಿ ಪ್ರಮಾಣಪತ್ರ ಇರುವವರು ಐಡಿಡಿ ಉತ್ತೀರ್ಣ ದಿನಾಂಕವು ಡಿಸೆಂಬರ್​ 31, 2021ರಂದು ಅಥವಾ ಅದಕ್ಕಿಂತ ಮುಂಚೆ ಸಲ್ಲಿಕೆ ಮಾಡಬೇಕು. – ಚಾರ್ಟರ್ಡ್ ಅಕೌಂಟೆಂಟ್ ಅಥವಾ ಕಾಸ್ಟ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಇರುವವರು ಸಹ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು ಆನ್​ಲೈನ್ ನೋಂದಣಿ: ಅಕ್ಟೋಬರ್ 5ರಿಂದ ಅಕ್ಟೋಬರ್ 25 ಹಂತ 1: ಆನ್​ಲೈನ್​ ಪ್ರಾಥಮಿಕ ಪರೀಕ್ಷೆ- ನವೆಂಬರ್/ಡಿಸೆಂಬರ್ 2021 ಹಂತ 2: ಆನ್​ಲೈನ್ ಮುಖ್ಯ ಪರೀಕ್ಷೆ- ಡಿಸೆಂಬರ್ 2021 ಹಂತ 3: ಸಂದರ್ಶನ (ಅಥವಾ ಸಂದರ್ಶನ ಮತ್ತು ಗುಂಪು ಪರೀಕ್ಷೆ)- 2022ರ ಫೆಬ್ರವರಿ ಎರಡು/ಮೂರನೇ ವಾರ

ವಯೋಮಿತಿ – 1.4.2021ಕ್ಕೆ ಅನ್ವಯ ಆಗುವಂತೆ, 21 ವರ್ಷಕ್ಕೆ ಕಡಿಮೆ ಇಲ್ಲದಂತೆ ಮತ್ತು ಅದೇ ದಿನಕ್ಕೆ 30 ವರ್ಷ ಮೇಲಿರಬಾರದು. ಅಭ್ಯರ್ಥಿಗಳು 2.04.1991ರಿಂದ 1.04.200ನೇ ಇಸವಿ ಮಧ್ಯೆ ಹುಟ್ಟಿರಬೇಕು. – ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ವಯೋಮಿತಿಯಲ್ಲಿ 5 ವರ್ಷದ ವಿನಾಯಿತಿ ಇದೆ. ಇತರ ಹಿಂದುಳಿದ ವರ್ಗ (ಕೆನೆಪದರ ಹೊರತಾಗಿ) 3 ವರ್ಷ, (PWD)- PWD (SC/ST) ದಿವ್ಯಾಂಗರಿಗೆ 15 ವರ್ಷಗಳ ವಿನಾಯಿತಿ ಇದೆ.

ಇದನ್ನೂ ಓದಿ: SBI Special FD: ಎಸ್​ಬಿಐ ವಿಶೇಷ ಎಫ್​ಡಿ ಯೋಜನೆ ಮಾರ್ಚ್ 31, 2022ರ ತನಕ ವಿಸ್ತರಣೆ

SBI Card Dumdar Dus Offer: ಎಸ್​ಬಿಐ ಕಾರ್ಡ್​ನಿಂದ ಆನ್​ಲೈನ್​ ಶಾಪಿಂಗ್​ಗೆ ಆಫರ್​ ಘೋಷಣೆ; ಅಕ್ಟೋಬರ್ 3ರಿಂದ ಶುರು

Published On - 1:20 pm, Tue, 5 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ