SBI Recruitment 2022: ಪ್ರಮುಖ ಹುದ್ದೆಗಳಿಗೆ ಸ್ಟೇಟ್ ಬ್ಯಾಂಕ್​ ಆಫ್​ ಇಂಡಿಯಾದಿಂದ ಅರ್ಜಿ ಆಹ್ವಾನ

State Bank of India Recruitment 2022: ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಮೊದಲು ಸ್ಕ್ಯಾನ್ ಮಾಡಬೇಕಾಗುತ್ತದೆ.

SBI Recruitment 2022: ಪ್ರಮುಖ ಹುದ್ದೆಗಳಿಗೆ ಸ್ಟೇಟ್ ಬ್ಯಾಂಕ್​ ಆಫ್​ ಇಂಡಿಯಾದಿಂದ ಅರ್ಜಿ ಆಹ್ವಾನ
SBI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 14, 2022 | 7:30 PM

State Bank of India Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರಮುಖ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. SBI ಯ ಅಧಿಕೃತ ವೆಬ್‌ಸೈಟ್www.sbi.co.in ನಲ್ಲಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ , ನಿಯಮಿತ ಮತ್ತು ಒಪ್ಪಂದದಡಿಯಲ್ಲಿ 35 ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ (SCO) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಒಟ್ಟು 35 ಹುದ್ದೆಗಳಿದ್ದು, ಅದರಲ್ಲಿ 7 ಮಂದಿಯನ್ನು ನಿಯಮಿತ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಹಾಗೆಯೇ 29 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದೆ.

ಅರ್ಜಿ ಶುಲ್ಕ: ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳಿಗೆ, ಅರ್ಜಿ ಶುಲ್ಕ ರೂ 750. ಆಗಿರುತ್ತದೆ. ಹಾಗೆಯೇ SC, ST ಮತ್ತು PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು SBI ವೆಬ್‌ಸೈಟ್‌ನಲ್ಲಿ (bank.sbi/web/careers ) ಲಭ್ಯವಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಇಂಟರ್ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಇತ್ಯಾದಿಗಳನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಮೊದಲು ಸ್ಕ್ಯಾನ್ ಮಾಡಬೇಕಾಗುತ್ತದೆ. ಅಭ್ಯರ್ಥಿಯು ವೆಬ್‌ಸೈಟ್‌ನಲ್ಲಿ ನಿರ್ದಿಷ್ಟಪಡಿಸಿದಂತೆ ಅವನ/ಅವಳ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡದ ಹೊರತು ಆನ್‌ಲೈನ್ ಅರ್ಜಿಗಳನ್ನು ನೋಂದಾಯಿಸಲಾಗುವುದಿಲ್ಲ.

ಆನ್‌ಲೈನ್‌ನಲ್ಲಿ ನೋಂದಾಯಿಸಿದ ನಂತರ, ಆನ್‌ಲೈನ್ ಅರ್ಜಿ ನಮೂನೆಗಳ ಪ್ರಿಂಟ್‌ಔಟ್ ತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

ಪ್ರಮುಖ ದಿನಾಂಕ: ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 27 ರಂದು ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 17, 2022. ಪ್ರವೇಶ

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ