State Bank of India Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರಮುಖ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. SBI ಯ ಅಧಿಕೃತ ವೆಬ್‌ಸೈಟ್www.sbi.co.in ನಲ್ಲಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ , ನಿಯಮಿತ ಮತ್ತು ಒಪ್ಪಂದದಡಿಯಲ್ಲಿ 35 ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ (SCO) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು:
ಒಟ್ಟು 35 ಹುದ್ದೆಗಳಿದ್ದು, ಅದರಲ್ಲಿ 7 ಮಂದಿಯನ್ನು ನಿಯಮಿತ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಹಾಗೆಯೇ 29 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದೆ.
ಅರ್ಜಿ ಶುಲ್ಕ:
ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳಿಗೆ, ಅರ್ಜಿ ಶುಲ್ಕ ರೂ 750. ಆಗಿರುತ್ತದೆ. ಹಾಗೆಯೇ SC, ST ಮತ್ತು PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು SBI ವೆಬ್‌ಸೈಟ್‌ನಲ್ಲಿ (bank.sbi/web/careers ) ಲಭ್ಯವಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಇಂಟರ್ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಇತ್ಯಾದಿಗಳನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಮೊದಲು ಸ್ಕ್ಯಾನ್ ಮಾಡಬೇಕಾಗುತ್ತದೆ. ಅಭ್ಯರ್ಥಿಯು ವೆಬ್‌ಸೈಟ್‌ನಲ್ಲಿ ನಿರ್ದಿಷ್ಟಪಡಿಸಿದಂತೆ ಅವನ/ಅವಳ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡದ ಹೊರತು ಆನ್‌ಲೈನ್ ಅರ್ಜಿಗಳನ್ನು ನೋಂದಾಯಿಸಲಾಗುವುದಿಲ್ಲ.
ಆನ್‌ಲೈನ್‌ನಲ್ಲಿ ನೋಂದಾಯಿಸಿದ ನಂತರ, ಆನ್‌ಲೈನ್ ಅರ್ಜಿ ನಮೂನೆಗಳ ಪ್ರಿಂಟ್‌ಔಟ್ ತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.
ಪ್ರಮುಖ ದಿನಾಂಕ:
ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 27 ರಂದು ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 17, 2022. ಪ್ರವೇಶ
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.