ಖಾಲಿ ಇರುವ 778 ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ ರಾಜ್ಯ ಸರ್ಕಾರ

| Updated By: ವಿವೇಕ ಬಿರಾದಾರ

Updated on: Aug 24, 2022 | 10:06 PM

ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಖಾಲಿ ಇರುವ 778 ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ ರಾಜ್ಯ ಸರ್ಕಾರ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಪಿಯು ಕಾಲೇಜುಗಳಲ್ಲಿ (PU College) ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ (Lecturer Post) ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. 10 ವಿಷಯಗಳ 778 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. 100 ಕನ್ನಡ, 120 ಇಂಗ್ಲಿಷ್, 120 ಇತಿಹಾಸ, 180 ಅರ್ಥಶಾಸ್ತ್ರ, 20 ಭೂಗೋಳಶಾಸ್ತ್ರ, 80 ವಾಣಿಜ್ಯ ಶಾಸ್ತ್ರ, 75 ಸಮಾಜಶಾಸ್ತ್ರ, 75 ರಾಜ್ಯಶಾಸ್ತ್ರ, 2 ಮನ:ಶಾಸ್ತ್ರ ಮತ್ತು 6 ಗಣಕ ವಿಜ್ಞಾನ ಉಪನ್ಯಾಸಕರ ಹುದ್ದೆ ಭರ್ತಿಗೆ ಅಂಗಿಕಾರ ನೀಡಿದೆ.

ಬೆಂಗಳೂರು: ಅಮೃತ ನಗರೋತ್ಥಾನ ಸಭೆ; 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಇಂದು (ಆ 24) ಗೃಹ ಕಚೇರಿ ಕೃಷ್ಣಾದಲ್ಲಿ ಅಮೃತ ನಗರೋತ್ಥಾನ ಸಭೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಅಮೃತ ನಗರೋತ್ಥಾನ ಹಂತ 4 ರ 9 ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು.

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ, ದಾಸರಹಳ್ಳಿ ಶಾಸಕ ಮಂಜುನಾಥ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Wed, 24 August 22