Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ!

ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ, ಬೆಂಗಳೂರಿನ ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಕಂಪನಿ 'ಸ್ಟೂಡೆಂಟ್ ಟ್ರೈನಿ' ಹುದ್ದೆಗಳಿಗೆ ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಸುತ್ತಿದೆ. ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ ಪದವೀಧರ ಪುರುಷ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಆಯ್ಕೆಯಾದವರಿಗೆ ಬೆಂಗಳೂರಿನಲ್ಲಿ ಉದ್ಯೋಗ, ಉಚಿತ B.Voc ಪದವಿ, ಊಟ, ವಸತಿ ಮತ್ತು ವಿಮಾ ಸೌಲಭ್ಯ ದೊರೆಯಲಿದೆ. ಮೇ 12 ರಂದು ಸಂದರ್ಶನದಲ್ಲಿ ಭಾಗವಹಿಸಿ.

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ!
ಉದ್ಯೋಗಕ್ಕಾಗಿ ನೇರ ಸಂದರ್ಶನ
Image Credit source: Ai generated

Updated on: May 06, 2026 | 3:16 PM

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರುವ 18 ರಿಂದ 25 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕೆಲಸದ ಸ್ಥಳವನ್ನು ನಿಗದಿಪಡಿಸಲಾಗಿದೆ.

ಈ ನೇಮಕಾತಿಯ ವಿಶೇಷತೆಯೆಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿಯ ವತಿಯಿಂದ ಉಚಿತವಾಗಿ ಬಿ.ವಾಕ್ (B.Voc) ಪದವಿ ಕೋರ್ಸ್ ಕಲಿಯುವ ಅವಕಾಶವನ್ನು ಒದಗಿಸಲಾಗುತ್ತದೆ. ಇದರೊಂದಿಗೆ ಉಚಿತ ಊಟ, ವಸತಿ ಸೌಲಭ್ಯ ಹಾಗೂ ಆರೋಗ್ಯ ವಿಮೆಯ ಸವಲತ್ತುಗಳನ್ನು ಸಹ ನೀಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಆಸಕ್ತ ಅಭ್ಯರ್ಥಿಗಳು ದಿನಾಂಕ 12-05-2026ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:30ರ ಒಳಗೆ ಮಂಗಳೂರಿನ ಪಡೀಲ್‌ನಲ್ಲಿರುವ ಪ್ರಜಾ ಸೌಧದ ನೆಲಮಹಡಿಯ ಕೊಠಡಿ ಸಂಖ್ಯೆ 04ಕ್ಕೆ ಭೇಟಿ ನೀಡಿ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಸಂದರ್ಶನ ಕಾರ್ಯಕ್ರಮವು ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 0824-2457139 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 6 May 26

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us