AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suvarna Arogya Trust Recruitment: ಕರ್ನಾಟಕ ಸರ್ಕಾರದಡಿಯಲ್ಲಿ ಉತ್ತಮ ವೇತನದ ವೈದ್ಯಕೀಯ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರಿನಲ್ಲಿ 35 ಸೀನಿಯರ್​ ಎಕ್ಸಿಕ್ಯೂಟಿವ್ ಡಾಕ್ಟರ್​​ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಉತ್ತಮ ವೇತನದ ಈ ವೈದ್ಯಕೀಯ ಉದ್ಯೋಗಗಳಿಗೆ ಎಂಬಿಬಿಎಸ್, ಬಿಡಿಎಸ್ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಹರು. ಆಸಕ್ತರು ಡಿಸೆಂಬರ್ 05ರಂದು ನೇರ ಸಂದರ್ಶನಕ್ಕೆ ಹಾಜರಾಗಿ ಈ ಅವಕಾಶವನ್ನು ಬಳಸಿಕೊಳ್ಳಬಹುದು.

Suvarna Arogya Trust Recruitment: ಕರ್ನಾಟಕ ಸರ್ಕಾರದಡಿಯಲ್ಲಿ ಉತ್ತಮ ವೇತನದ ವೈದ್ಯಕೀಯ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಅಕ್ಷತಾ ವರ್ಕಾಡಿ
|

Updated on: Nov 29, 2025 | 1:10 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಕ್ಸಿಕ್ಯೂಟಿವ್​ ಡಾಕ್ಟರ್​​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 05ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗತಕ್ಕದ್ದು.

ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
  • ಹುದ್ದೆಗಳ ಸಂಖ್ಯೆ: 35
  • ಉದ್ಯೋಗ ಸ್ಥಳ: ಬೆಂಗಳೂರು
  • ಪೋಸ್ಟ್ ಹೆಸರು: ಹಿರಿಯ ಕಾರ್ಯನಿರ್ವಾಹಕ ವೈದ್ಯರು (Senior Executive Doctors)
  • ಸಂಬಳ: 45,000 – 1,50,000 ರೂ. ಮಾಸಿಕ ವೇತನ

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಡಿಎಸ್, ಬಿಇ/ ಬಿ.ಟೆಕ್, ಎಂಪಿಎಚ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10:30 ರಿಂದ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7 ನೇ ಮಹಡಿ, ಬೆಂಗಳೂರು – 560023

ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​; ಹೀಗೆ ಅರ್ಜಿ ಸಲ್ಲಿಸಿ

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ