
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಕ್ಸಿಕ್ಯೂಟಿವ್ ಡಾಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 05ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗತಕ್ಕದ್ದು.
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಡಿಎಸ್, ಬಿಇ/ ಬಿ.ಟೆಕ್, ಎಂಪಿಎಚ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10:30 ರಿಂದ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7 ನೇ ಮಹಡಿ, ಬೆಂಗಳೂರು – 560023
ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್; ಹೀಗೆ ಅರ್ಜಿ ಸಲ್ಲಿಸಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ