TCS Careers: ಟಿಸಿಎಸ್​ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

TCS Careers: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ www.tcs.com ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

TCS Careers: ಟಿಸಿಎಸ್​ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
TCS Careers
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 04, 2022 | 9:13 PM

TCS job: ದೇಶದ ಪ್ರಮುಖ ಐಟಿ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ (Tata Consultancy Services Limited) ವಿವಿಧ ಹುದ್ದೆಗಳಿಗೆ ಫ್ರೆಶರ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ 2019, 2020, ಅಥವಾ 2021 ರಲ್ಲಿ ಕಾಲೇಜು ಕೋರ್ಸ್‌ಗಳನ್ನು ಪೂರ್ಣಗೊಳಿಸಿದ BE, B.Tech, M.Tech, MCA, MSc ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಅರ್ಜಿದಾರರು 10, 12 ಮತ್ತು ಪದವಿಯಲ್ಲಿ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಎಂಬ ಕಂಡಿಷನ್ ನೀಡಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 28 ರೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: BE, B.Tech, M.Tech, MCA, MSc ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರ ಮೇಲೆ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ www.tcs.com ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ:  Indian Army Jobs 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿದೆ ಉದ್ಯೋಗಾವಕಾಶ

ಇದನ್ನೂ ಓದಿ:  India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು