TCS job: ದೇಶದ ಪ್ರಮುಖ ಐಟಿ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ (Tata Consultancy Services Limited) ವಿವಿಧ ಹುದ್ದೆಗಳಿಗೆ ಫ್ರೆಶರ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ 2019, 2020, ಅಥವಾ 2021 ರಲ್ಲಿ ಕಾಲೇಜು ಕೋರ್ಸ್‌ಗಳನ್ನು ಪೂರ್ಣಗೊಳಿಸಿದ BE, B.Tech, M.Tech, MCA, MSc ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಅರ್ಜಿದಾರರು 10, 12 ಮತ್ತು ಪದವಿಯಲ್ಲಿ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಎಂಬ ಕಂಡಿಷನ್ ನೀಡಲಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿವೆ.
ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 28 ರೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
BE, B.Tech, M.Tech, MCA, MSc ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರ ಮೇಲೆ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?:
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ www.tcs.com ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Indian Army Jobs 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿದೆ ಉದ್ಯೋಗಾವಕಾಶ
ಇದನ್ನೂ ಓದಿ: India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು