AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TCS Recruitment 2022: ಟಿಸಿಎಸ್​ನಲ್ಲಿ ಉದ್ಯೋಗಾವಕಾಶ: ವೇತನ 7 ಲಕ್ಷ ರೂ.

Recruitment 2022: ಅಭ್ಯರ್ಥಿಯು ಕೇವಲ ಒಂದು ಅರ್ಜಿಯನ್ನು ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದರೆ ಅಭ್ಯರ್ಥಿಯನ್ನು ಅನರ್ಹಗೊಳಿಸಲಾಗುತ್ತದೆ.

TCS Recruitment 2022: ಟಿಸಿಎಸ್​ನಲ್ಲಿ ಉದ್ಯೋಗಾವಕಾಶ: ವೇತನ 7 ಲಕ್ಷ ರೂ.
TCS
TV9 Web
| Updated By: ಝಾಹಿರ್ ಯೂಸುಫ್|

Updated on: Feb 15, 2022 | 9:00 AM

Share

TCS Off Campus Digital Hiring 2022: ಪ್ರಮುಖ IT ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಆಫ್ ಕ್ಯಾಂಪಸ್ ಡಿಜಿಟಲ್ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 25, 2022 ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಕ್ಯಾಂಪಸ್ ನೇಮಕಾತಿಗೆ ಹಾಜರಾಗಿರುವ ಅಭ್ಯರ್ಥಿಗಳು ನಂತರ ನೀಡಿದ CT / DT ID ಯೊಂದಿಗೆ ಇತ್ತೀಚಿನ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಕನಿಷ್ಠ 6 ರಿಂದ 12 ತಿಂಗಳ ಕಾಲ ಐಟಿ ಕಂಪನಿಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆಗಳು : 2019, 2020, 2021 ನೇ ಸಾಲಿನಲ್ಲಿ ಉತ್ತೀರ್ಣರಾದ BE, BTech, ME, MTech, MCA, MSc ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅನುಭವ: ಐಟಿ ಕಂಪನಿಯಲ್ಲಿ ಕನಿಷ್ಠ 6 ತಿಂಗಳಿಂದ 12 ತಿಂಗಳವರೆಗೆ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾರ್ಷಿಕ 7,00,000 ಮತ್ತು ಸ್ನಾತಕೋತ್ತರ ಪದವೀಧರರಿಗೆ ವಾರ್ಷಿಕ 7,30,000 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 25, 2022

ಪರೀಕ್ಷಾ ದಿನಾಂಕ: ಶೀಘ್ರದಲ್ಲೇ ಬಹಿರಂಗಪಡಿಸಲಾಗುತ್ತದೆ.

ಸಂದರ್ಶನದ ದಿನಾಂಕ: ಪರೀಕ್ಷೆಯ ನಂತರ ಬಹಿರಂಗಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಟಿಸಿಎಸ್​ ನೇಮಕಾತಿ ಕುರಿತಾದ ಮಾಹಿತಿಗಾಗಿ ಕಂಪೆನಿಯ ಅಧಿಕೃತ ವೆಬ್‌ಸೈಟ್​ಗೆ ಭೇಟಿ ನೀಡಿ ಪರಿಶೀಲಿಸಬಹುದು.

ಅಭ್ಯರ್ಥಿಗಳಿಗೆ ಸೂಚನೆ: ಅಭ್ಯರ್ಥಿಯು ಕೇವಲ ಒಂದು ಅರ್ಜಿಯನ್ನು ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದರೆ ಅಭ್ಯರ್ಥಿಯನ್ನು ಅನರ್ಹಗೊಳಿಸಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಪೂರ್ಣಗೊಳಿಸಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಅರ್ಹತಾ ಪ್ರಮಾಣಪತ್ರಗಳೊಂದಿಗೆ ಉದ್ಯೋಗ ದಾಖಲೆಗಳನ್ನು ಇಟ್ಟುಕೊಳ್ಳಬೇಕು. TCS iON ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುತ್ತದೆ. ಸಂಬಂಧಿತ ವೆಬ್‌ಸೈಟ್‌ನಲ್ಲಿ ನೀವು ಕಾಲಕಾಲಕ್ಕೆ ವಿವರಗಳನ್ನು ಪರಿಶೀಲಿಸಬಹುದು.

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(TCS Off Campus Digital Hiring 2022)