TFRI Recruitment 2022: TFRI ನಲ್ಲಿ ಹಲವು ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
TFRI Recruitment 2022: ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 30 ವರ್ಷಗಳ ನಡುವೆ ಇರಬೇಕು. ಮತ್ತೊಂದೆಡೆ, OBC ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಮತ್ತು SC ಮತ್ತು ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
Government Jobs Vacancy 2022: ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್ (TFRI Recruitment 2022) ಸ್ಟೆನೋಗ್ರಾಫರ್, ಎಲ್‌ಡಿಸಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ tfri.icfre.gov.in ಮೂಲಕ 5 ಮಾರ್ಚ್ 2022 ರವರೆಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
TFRI Recruitment 2022: ಖಾಲಿ ಹುದ್ದೆಗಳ ಸಂಖ್ಯೆ: ಸ್ಟೆನೋಗ್ರಾಫರ್ – 9 ತಾಂತ್ರಿಕ ಸಹಾಯಕ – 2 LDC – 9 ತಂತ್ರಜ್ಞ – 3 ಫಾರೆಸ್ಟ್ ಗಾರ್ಡ್ – 3 MTS – 16
TFRI Recruitment 2022 ಶೈಕ್ಷಣಿಕ ಅರ್ಹತೆ: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿ ತೇರ್ಗಡೆಯಾಗಿರಬೇಕು. ಆದರೆ ಎಂಟಿಎಸ್ ಹುದ್ದೆಗಳಿಗೆ ಅಭ್ಯರ್ಥಿಯು 10ನೇ ತರಗತಿ ತೇರ್ಗಡೆಯಾಗಿರಬೇಕು. ಹೆಚ್ಚಿನ ಶೈಕ್ಷಣಿಕ ಅರ್ಹತೆ ಮತ್ತು ಈ ನೇಮಕಾತಿಗೆ ಸಂಬಂಧಿಸಿದ ಇತರೆ ಮಾಹಿತಿಗಾಗಿ, ಅಭ್ಯರ್ಥಿಗಳು ಬಿಡುಗಡೆಯಾದ ಅಧಿಸೂಚನೆಯನ್ನು ಪರಿಶೀಲಿಸಬಹುದು.
TFRI Recruitment 2022: ವಯೋಮಿತಿ: ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 30 ವರ್ಷಗಳ ನಡುವೆ ಇರಬೇಕು. ಮತ್ತೊಂದೆಡೆ, OBC ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಮತ್ತು SC ಮತ್ತು ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
TFRI Recruitment 2022 ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಟ್ರೇಡ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗುತ್ತದೆ.
TFRI Recruitment 2022 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 5 ಮಾರ್ಚ್ 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: World Record: ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್ಮನ್