Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS) ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಎಚ್‌ಡಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು. ಆಸಕ್ತರು ಅಧಿಸೂಚನೆ ಓದಿ, ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಶುಲ್ಕ ಪಾವತಿಸಿ ಫೆಬ್ರವರಿ 02 ರೊಳಗೆ ವಿಳಾಸಕ್ಕೆ ಕಳುಹಿಸಬೇಕು. ಇದು ಸರ್ಕಾರಿ ವಲಯದಲ್ಲಿ ಉತ್ತಮ ಉದ್ಯೋಗಾವಕಾಶ.

Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ
Professor Recruitment

Updated on: Jan 17, 2026 | 5:59 PM

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು(UAS) ಅಧಿಕೃತ ಅಧಿಸೂಚನೆಯ ಮೂಲಕ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02 ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು.

ಶೈಕ್ಷಣಿಕ ಅರ್ಹತೆ:

ಯುಎಎಸ್ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
    ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.
  • ವಿಳಾಸ: ಆಡಳಿತಾಧಿಕಾರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ