
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ(UAS Dharwad)ವು ಅಧಿಕೃತ ಅಧಿಸೂಚನೆಯ ಮೂಲಕ ಹನುಮನಮಟ್ಟಿಯಲ್ಲಿ ವಿಸಿಟಿಂಗ್ ಡಾಕ್ಟರ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಿಂದ ಹನುಮನಮಟ್ಟಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 18 ರಂದು ಬೆಳಿಗ್ಗೆ 11:00 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಶೈಕ್ಷಣಿಕ ಅರ್ಹತೆ:
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಇದನ್ನೂ ಓದಿ: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಉಪಯುಕ್ತ ಮಾಹಿತಿ ಇಲ್ಲಿದೆ
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನಮೂದಿಸಿರುವ ಅರ್ಜಿ ನಮೂನೆಯಲ್ಲಿ ಸ್ವವಿವರಗಳನ್ನು ಭರ್ತಿ ಮಾಡಿದ ಎರಡು ಪ್ರತಿಗಳೊಂದಿಗೆ ದಿ: 18.03.2025 ರಂದು ಬೆಳಿಗ್ಗೆ 11.00ಗಂಟೆಗೆ ಡೀನ್ (ಕೃಷಿ) ರವರ ಕಾರ್ಯಾಲಯ, ಕೃಷಿ ಮಹಾವಿದ್ಯಾಲಯ, ಹನುಮನಮಟ್ಟಿಯಲ್ಲಿ ಸಂದರ್ಶನಕ್ಕೆ ಹಾಜರಾಗ ಬೇಕು. ಸಂದರ್ಶನಕ್ಕೆ ಬರುವಾಗ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳನ್ನು ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಪ್ರಾಧಾನ್ಯತೆ ನೀಡಲಾಗುವುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:30 pm, Fri, 7 March 25