UCO Bank Recruitment 2022: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Oct 03, 2022 | 3:59 PM

UCO Bank Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್ ucobank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

UCO Bank Recruitment 2022: ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
UCO Bank Recruitment 2022
Follow us on

UCO Bank Recruitment 2022: ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿನ (UCO Bank) ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್ ucobank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಭದ್ರತಾ ಅಧಿಕಾರಿಗಳು- ಒಟ್ಟು 10 ಹುದ್ದೆಗಳು

ವಿದ್ಯಾರ್ಹತೆ:
ಯಾವುದಾದದರು ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಂದರೆ ಡಿಗ್ರಿ ಮಾಡಿದವರಿಗೆ ಅರ್ಜಿ ಹಾಕಬಹುದಾಗಿದೆ.

ಇದನ್ನೂ ಓದಿ
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಯೋಮಿತಿ:
ಈ ಹುದ್ದೆಗಳಿಗೆ 21 ರಿಂದ 35 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

  • UR/EWS/OBC ವರ್ಗಕ್ಕೆ ಅರ್ಜಿ ಶುಲ್ಕ- 500 ರೂ.
  • SC/ST ವರ್ಗಕ್ಕೆ ಅರ್ಜಿ ಶುಲ್ಕ- 100 ರೂ.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 36 ಸಾವಿರದಿಂದ 63840 ರೂ. ವರೆಗೆ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 19, 2022

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ucobank.com ಗೆ ಭೇಟಿ ನೀಡಿ ನೇರವಾಗಿ ಅಪ್ಲಿಕೇಶ್ನ ಹಾಕಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.