ವೃತ್ತಿಪರ ಕೋರ್ಸ್‌ ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ

ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಕೊನೆ ದಿನಾಂಕವನ್ನು ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ. ಜೊತೆಗೆ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳಿಗೆ ಫೆ.21 ಮತ್ತು 22ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, ಅವುಗಳ ಅಂತಿಮ ಕೀ ಉತ್ತರ ಹಾಗೂ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಪಟ್ಟಿ ಯನ್ನು ಪ್ರಕಟಿಸಿದೆ.

ವೃತ್ತಿಪರ ಕೋರ್ಸ್‌  ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ
Kea

Updated on: Mar 04, 2026 | 7:37 PM

ಬೆಂಗಳೂರು, (ಮಾರ್ಚ್ 04): ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (karnataka examination authority) ವಿಸ್ತರಿಸಿದೆ. ಮಾರ್ಚ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ. ಇನ್ನೂ 9 ಸಾವಿರ ಮಂದಿ ಶುಲ್ಕ ಪಾವತಿಸಬೇಕಿದ್ದು, ಅವರಿಗೆ ಅನುಕೂಲ ಆಗಲೆಂದು ದಿನಾಂಕ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ನೇಮಕಾತಿ: ಅಂಕಪಟ್ಟಿ ಪ್ರಕಟ

ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳಿಗೆ ಫೆಬ್ರವರಿ 21 ಮತ್ತು 22ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, ಅವುಗಳ ಅಂತಿಮ ಕೀ ಉತ್ತರ ಹಾಗೂ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಜೊತೆಗೆ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾರ್ಚ್ 6ರಂದು ಬೆಳಿಗ್ಗೆ 11ಗಂಟೆ ಒಳಗೆ ಆನ್‌ಲೈನ್ ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾರ್ಚ್ 7ರಂದು ಮಧ್ಯಾಹ್ನ 12ಗಂಟೆಯೊಳಗೆ ಸಲ್ಲಿಸಬೇಕು. ಈ https://cetonline.karnataka.gov.in/kea/ ಲಿಂಕ್ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ್ದ ಒಟ್ಟು 2.31 ಲಕ್ಷ ಮಂದಿ ಪೈಕಿ ಶೇ.98ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us