UPSC Recruitment 2021: ಕೇಂದ್ರ ಲೋಕಸೇವಾ ಆಯೋಗದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
UPSC Recruitment 2021: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 187 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದ್ದು, ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಕಮಿಷನರ್ ಕ್ವಾಲಿಟಿ ಅಸುರೆನ್ಸ್, ಅಸಿಸ್ಟೆಂಟ್ ಇಂಜಿನಿಯರ್ ಕ್ವಾಲಿಟಿ ಅಸುರೆನ್ಸ್ ಇಲೆಕ್ಟ್ರಾನಿಕ್ಸ್, ಅಸಿಸ್ಟೆಂಟ್ ಇಂಜಿನಿಯರ್ ಕ್ವಾಲಿಟಿ ಅಸುರೆನ್ಸ್, ಜೆನ್‌ಟೆಕ್ಸ್, ಜೂನಿಯರ್ ಟೈಮ್ ಸ್ಕೇಲ್ (ಜೆಟಿಎಸ್) ಗ್ರೇಡ್ ಆಫ್ ಜೆನೆರಲ್ ಲೇಬರ್ ಸರ್ವೀಸ್, ಗ್ರೂಪ್ ಎ ಸರ್ವೀಸ್, ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಆಫೀಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಇತರೆ ಪ್ರಮುಖ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು: ಸಹಾಯಕ ಆಯುಕ್ತರು: 2 ಹುದ್ದೆಗಳು ಸಹಾಯಕ ಇಂಜಿನಿಯರ್ (ಕ್ವಾಲಿಟಿ ಅಸುರೆನ್ಸ್): 157 ಹುದ್ದೆಗಳು ಜೂನಿಯರ್ ಟೈಮ್ ಸ್ಕೇಲ್ (JTS): 17 ಹುದ್ದೆಗಳು ಆಡಳಿತಾಧಿಕಾರಿ: 9 ಹುದ್ದೆಗಳು ಸಹಾಯಕ ಪ್ರಾಧ್ಯಾಪಕ: 2 ಹುದ್ದೆ
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ / ಸ್ನಾತಕೋತ್ತರ ಪದವಿ / ಬಿಇ / ಬಿ.ಟೆಕ್ ಅನ್ನು ಸಂಬಂಧಿಸಿದ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಶುಲ್ಕ: ಅಭ್ಯರ್ಥಿಗಳು 25 ರೂ. ಅನ್ನು ಎಸ್‌ಬಿಐನ ಯಾವುದೇ ಶಾಖೆಯಲ್ಲಿ ನಗದು ಮೂಲಕ ಅಥವಾ ಎಸ್‌ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಪಾವತಿಸಬೇಕು. ಇನ್ನು SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13-01-2022 ಅರ್ಜಿ ತಿದ್ದುಪಡಿಗೆ ಕೊನೆ ದಿನಾಂಕ: 14-01-2022
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಆಯ್ಕೆ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!
ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…
ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ