ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಬೇಕಾದ ಅಂಶವೆಂದರೆ, ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30. ಸಂಪೂರ್ಣವಾಗಿ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಜುಲೈ 1 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಮೂಲಕ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಎಲ್ಲಾ ಅರ್ಜಿದಾರರು ಪೋಸ್ಟ್‌ನ ಅಗತ್ಯ ದಾಖಲೆಗಳನ್ನು ಪೂರೈಸಬೇಕು.
ಇದನ್ನೂ ಓದಿ: Viral Video: ಅಂದು ದ್ರಾವಿಡ್ ಬಾರಿಸಿದ ಸಿಕ್ಸ್ ಹೋಗಿ ಬಿದ್ದಿದ್ದು ಎಲ್ಲಿ ಗೊತ್ತಾ?
ಗಮನಿಸಬೇಕಾದ ಅಂಶಗಳು
ಹುದ್ದೆಯ ವಿವರಗಳು
ಇದನ್ನೂ ಓದಿ: Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ
ಅರ್ಹತಾ ಮಾನದಂಡ
ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಅಥವಾ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಜವಳಿ ತಂತ್ರಜ್ಞಾನದಲ್ಲಿ ಪದವಿ ಅಥವಾ ರಬ್ಬರ್ ತಂತ್ರಜ್ಞಾನದಲ್ಲಿ ಪದವಿ ಅಥವಾ ಪ್ಲಾಸ್ಟಿಕ್ ತಂತ್ರಜ್ಞಾನದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು.
ಸಹಾಯಕ ಗಣಿಗಾರಿಕೆ ಭೂವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಭೂವಿಜ್ಞಾನ ಅಥವಾ ಅನ್ವಯಿಕ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.
ಇದನ್ನೂ ಓದಿ: Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!
ಅರ್ಜಿ ಶುಲ್ಕ
ಅಭ್ಯರ್ಥಿಗಳು 25 ರೂ.ವನ್ನು SBIಯ ಯಾವುದೇ ಶಾಖೆಯಲ್ಲಿ ಹಣವನ್ನು ನಗದು ಮೂಲಕ ಅಥವಾ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಂಡು ಅಥವಾ ವೀಸಾ/ಮಾಸ್ಟರ್ ಕ್ರೆಡಿಟ್/ಡೆಬಿಟ್ ಕಾರ್ಡ್ ಅನ್ನು ಬಳಸುವ ಮೂಲಕ ಪಾವತಿಸಬಹುದು. SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್ upsc.gov.in ಮೂಲಕ ಜೂನ್ 30, 2022 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ