ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
Urban Development Department Karnataka Recruitment 2024 : ನಗರಾಭಿವೃದ್ದಿ ಇಲಾಖೆಯಿಂದ ಖಾಲಿ ಇರುವ ಸ್ಟೇಟ್ ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಖಾಲಿಯಿರುವ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ. ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳ ಕುರಿತಾದ ಮಾಹಿತಿ ಈ ಕೆಳಗಿದೆ.
ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಇಲ್ಲೊಂದು ಸಿಹಿ ಸುದ್ದಿಯೊಂದು ಕಾದಿದೆ. ಇದೀಗ, ನಗರಾಭಿವೃದ್ದಿ ಇಲಾಖೆಯಿಂದ ಖಾಲಿ ಇರುವ ಸ್ಟೇಟ್ ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ತಿಂಗಳ 21 ರೊಳಗಾಗಿ ಉದ್ಯೋಗಕ್ಕಾಗಿ ಹುಡುಕುತ್ತಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು
* ಇಲಾಖೆ ಹೆಸರು : ನಗರಾಭಿವೃದ್ದಿ ಇಲಾಖೆ
* ಹುದ್ದೆಗಳ ಹೆಸರು : ಸ್ಟೇಟ್ ನಮಸ್ತೆ ಕೋಆರ್ಡಿನೇಟರ್
* ಒಟ್ಟು ಹುದ್ದೆಗಳು : 02
* ಉದ್ಯೋಗ ಸ್ಥಳ : ಕರ್ನಾಟಕ
ವಿದ್ಯಾರ್ಹತೆ ಹಾಗೂ ವಯೋಮಿತಿ
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಬನ್ ಪ್ಲಾನಿಂಗ್, ಸೋಷಿಯಲ್ ವರ್ಕ್, ಪಬ್ಲಿಕ್ ಪಾಲಿಸಿ, ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್, ಸೋಷಿಯಾಲಜಿ, ಅಂಥರೋಪಾಲಜಿ, ಕಾಮರ್ಸ್, ಸೈನ್ಸ್ ನಲ್ಲಿ ಶೇಕಡಾ 55% ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದಿರಬೇಕು.
* ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
* ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
ವೇತನಶ್ರೇಣಿ ಹಾಗೂ ಅರ್ಜಿ ಶುಲ್ಕ
* ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 45,000 ವೇತನ ನೀಡಲಾಗುತ್ತದೆ.
* ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
* ಈ ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
* ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಅರ್ಜಿಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ, ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ.
* ಈ ಅರ್ಜಿಯೊಂದಿಗೆ ಅಗತ್ಯವಿರುವ ಪ್ರಮಾಣ ಪತ್ರ ಹಾಗೂ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕು.
ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ 188 ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಳಾಸ
ರಾಜ್ಯ ಅಭಿಯಾನ ನಿರ್ದೇಶಕರು, ಸ್ವಚ್ಛ ಭಾರತ ಮಿಷನ್, ನಗರಾಭಿವೃದ್ದಿ ಇಲಾಖೆ, 9ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು – 560001
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 30, 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 21, 2024
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ