Uttara Kannada Home Guard Recruitment 2025: 140 ಗೃಹರಕ್ಷಕ ದಳ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಅರ್ಜಿ ಸಲ್ಲಿಸಿ
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳವು ಹೊಸ ನೇಮಕಾತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಮಾರ್ಚ್ 3 ರೊಳಗೆ ಕಾರವಾರದ ಗೃಹರಕ್ಷಕ ದಳ ಕಚೇರಿಯ ವಿಳಾಸಕ್ಕೆ ಅರ್ಜಿ ಸಲ್ಲಿಸಿ.

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಅಧಿಕೃತ ಅಧಿಸೂಚನೆಯ ಮೂಲಕ ಗೃಹರಕ್ಷಕ ದಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 03 ರೊಳಗೆ ಅರ್ಜಿ ಸಲ್ಲಿಸಬೇಕು.
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ ಅರ್ಹತಾ ವಿವರಗಳು:
ಶೈಕ್ಷಣಿಕ ಅರ್ಹತೆ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 50 ವರ್ಷ ವಯಸ್ಸಿನವರಾಗಿರಬೇಕು.
ಇದನ್ನೂ ಓದಿ: 10 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ; ಈ ಕೂಡಲೇ ಅರ್ಜಿ ಸಲ್ಲಿಸಿ
ಅಗತ್ಯವಿರುವ ದಾಖಲೆಗಳು:
- 10th ಮಾರ್ಕ್ಸ್ ಕಾರ್ಡ್
- ಆಧಾರ್ ಕಾರ್ಡ್
- ಫಿಟ್ನೆಸ್ ಪ್ರಮಾಣಪತ್ರ (ಸರ್ಕಾರಿ ಆಸ್ಪತ್ರೆಯಿಂದ)
- 2 ಪಾಸ್ ಪೋರ್ಟ್ ಫೋಟೋಗಳು
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಗೃಹರಕ್ಷಕ ದಳದ ಜಿಲ್ಲಾ ಕಚೇರಿ, ಸರ್ವೋದಯ ನಗರ, ದಿವೇಕರ್ ವಾಣಿಜ್ಯ ಕಾಲೇಜಿನ ಎದುರು, ಕೋಡಿಬಾಗ್, ಕಾರವಾರ ಈ ವಿಳಾಸಕ್ಕೆ ಮಾರ್ಚ್ 03ಅಥವಾ ಅದಕ್ಕೂ ಮೊದಲು ಸಲ್ಲಿಸಬೇಕು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




