Recruitment 2022: ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ: ವೇತನ ಬರೋಬ್ಬರಿ 41 ಸಾವಿರ ರೂ.
Village Accountant recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ 12ನೇ ತರಗತಿಯಲ್ಲಿ ಪಾಸಾಗಿರಬೇಕು.
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದ ತಾಲ್ಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿಯಿರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಉತ್ತರಕರ್ನಾಟಕದದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮೇ 10 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು: ಹುದ್ದೆಯ ಹೆಸರು: ಗ್ರಾಮ ಲೆಕ್ಕಿಗ ಅಥವಾ ವಿಲೇಜ್ ಅಕೌಂಟ್ ಒಟ್ಟು ಹುದ್ದೆಗಳ ಸಂಖ್ಯೆ: 102 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ 12ನೇ ತರಗತಿಯಲ್ಲಿ ಪಾಸಾಗಿರಬೇಕು. ಮುಕ್ತ ವಿಶ್ವವಿದ್ಯಾಲಯಗಳಿಂದ ಪಡೆದಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಹಾಗೂ ಜೆ.ಓ.ಸಿ/ಐಟಿಐ ಹಾಗೂ ಇತರೆ ತತ್ಸಮಾನ ಪರೀಕ್ಷೆಗಳ ಅಂಕಪಟ್ಟಿಗಳನ್ನು ಅಂಗೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ಇರಲಿದೆ. ಹಾಗೆಯೇ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 150 ರೂ. ಮತ್ತು SE / ST / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21 ಸಾವಿರದಿಂದ 42 ಸಾವಿರದವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷವಾಗಿರಬೇಕು. ಹಾಗೆಯೇ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಇದಾಗ್ಯೂ ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮೇ 10, 2022
ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳುuttarakannada.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?