ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದ ತಾಲ್ಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿಯಿರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಉತ್ತರಕರ್ನಾಟಕದದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮೇ 10 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು:
ಹುದ್ದೆಯ ಹೆಸರು: ಗ್ರಾಮ ಲೆಕ್ಕಿಗ ಅಥವಾ ವಿಲೇಜ್ ಅಕೌಂಟ್
ಒಟ್ಟು ಹುದ್ದೆಗಳ ಸಂಖ್ಯೆ: 102 ಹುದ್ದೆಗಳು
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ 12ನೇ ತರಗತಿಯಲ್ಲಿ ಪಾಸಾಗಿರಬೇಕು. ಮುಕ್ತ ವಿಶ್ವವಿದ್ಯಾಲಯಗಳಿಂದ ಪಡೆದಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಹಾಗೂ ಜೆ.ಓ.ಸಿ/ಐಟಿಐ ಹಾಗೂ ಇತರೆ ತತ್ಸಮಾನ ಪರೀಕ್ಷೆಗಳ ಅಂಕಪಟ್ಟಿಗಳನ್ನು ಅಂಗೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ಇರಲಿದೆ. ಹಾಗೆಯೇ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 150 ರೂ. ಮತ್ತು SE / ST / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21 ಸಾವಿರದಿಂದ 42 ಸಾವಿರದವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷವಾಗಿರಬೇಕು. ಹಾಗೆಯೇ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಇದಾಗ್ಯೂ
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮೇ 10, 2022
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳುuttarakannada.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?