VITM Recruitment 2025: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM) 12 ಕಚೇರಿ ಸಹಾಯಕ, ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ, ITI, 12ನೇ ತರಗತಿ ಅಥವಾ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಹರು. ರೂ 36,220-59,600 ಸಂಬಳವಿದ್ದು, ಕ್ಯಾಲಿಕಟ್, ತಿರುಪತಿ, ಕಲಬುರಗಿ, ಬೆಂಗಳೂರಿನಲ್ಲಿ ಉದ್ಯೋಗ ಅವಕಾಶಗಳಿವೆ. ಆಸಕ್ತರು ಅಕ್ಟೋಬರ್ 20 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. SC, ST, PWD, ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ಇದೆ.

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವು ಅಧಿಕೃತ ಅಧಿಸೂಚನೆಯ ಮೂಲಕ ಕಚೇರಿ ಸಹಾಯಕ, ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕ್ಯಾಲಿಕಟ್, ತಿರುಪತಿ, ಕಲಬುರಗಿ, ಬೆಂಗಳೂರು, ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್-20 ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
VITM ಹುದ್ದೆಯ ಅಧಿಸೂಚನೆ:
- ಸಂಸ್ಥೆಯ ಹೆಸರು : ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ( VITM )
- ಹುದ್ದೆಗಳ ಸಂಖ್ಯೆ: 12
- ಉದ್ಯೋಗ ಸ್ಥಳ: ಕ್ಯಾಲಿಕಟ್, ತಿರುಪತಿ , ಕಲಬುರಗಿ, ಬೆಂಗಳೂರು
- ಹುದ್ದೆಯ ಹೆಸರು: ಕಚೇರಿ ಸಹಾಯಕ, ತಂತ್ರಜ್ಞ
- ಸಂಬಳ: ತಿಂಗಳಿಗೆ ರೂ. 36,220 – 59,600 ರೂ.
ಶೈಕ್ಷಣಿಕ ಅರ್ಹತೆಯ ವಿವರಗಳು:
VITM ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ITI, 12ನೇ ತರಗತಿ, ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:
ಇತರ ಎಲ್ಲಾ ಅಭ್ಯರ್ಥಿಗಳು 885 ರೂ. ಪಾವತಿಸಬೇಕು. ಆದರೆ SC, ST, PWD, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಪಾವತಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲನೆಯದಾಗಿ VITM ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(VITM-recruitment-for-Office-Assistant-Technician-Posts-Notification)
- VITM ಆಫೀಸ್ ಅಸಿಸ್ಟೆಂಟ್, ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
- VITM ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
- ಕೊನೆಯದಾಗಿ VITM ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿಯ ಪ್ರಿಂಟ್ ಕಾಪಿಯನ್ನು ತೆಗೆದಿಟ್ಟುಕೊಳ್ಳು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




