AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಬೋಧಕ ಹುದ್ದೆಗಳು; ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಶೇ. 75ರಷ್ಟು ಮೀಸಲಾತಿ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ, ಭಾರತೀಯ ಸಂವಿಧಾನದ 371(ಜೆ) ಅನುಚ್ಛೇದದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಶೇ.75 ಬೋಧಕ ಹುದ್ದೆಗಳನ್ನು ಮೀಸಲಿಡುವ ಕರಡು ಅಧಿಸೂಚನೆ ಹೊರಡಿಸಿದೆ. ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಇದು ಅನ್ವಯ. ಆಸಕ್ತರು 15 ದಿನಗಳೊಳಗೆ ತಮ್ಮ ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು. ಇದು ಪ್ರಾದೇಶಿಕ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮಹತ್ವದ ಕ್ರಮವಾಗಿದೆ.

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಬೋಧಕ ಹುದ್ದೆಗಳು; ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಶೇ. 75ರಷ್ಟು ಮೀಸಲಾತಿ
Professor Recruitment
ಅಕ್ಷತಾ ವರ್ಕಾಡಿ
|

Updated on:Feb 05, 2026 | 12:33 PM

Share

ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) ಮಹತ್ವದ ಕರಡು ಅಧಿಸೂಚನೆಯನ್ನು ಪ್ರಕಟಿಸಿದ್ದು, ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013ರ ಅನ್ವಯ ವಿಶ್ವವಿದ್ಯಾಲಯದ ಬೋಧಕ ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಗಳಿಗೆ ಶೇ. 75 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಈ ಕ್ರಮವು ಸಂವಿಧಾನದ ಅನುಚ್ಛೇದ 371(ಜೆ) ಅಡಿಯಲ್ಲಿ ಜಾರಿಯಾಗಿದ್ದು, ಸ್ಥಳೀಯ ಯುವಕರಿಗೆ ಸರ್ಕಾರಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ.

ವಿಶ್ವವಿದ್ಯಾಲಯದಲ್ಲಿ ಒಟ್ಟು 139 ಬೋಧಕ ಹುದ್ದೆಗಳು ಲಭ್ಯವಿದ್ದು, ಅವುಗಳಲ್ಲಿ 105 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲ್ಪಟ್ಟಿವೆ. ಉಳಿದ 34 ಹುದ್ದೆಗಳು ಸಾಮಾನ್ಯ ವೃಂದಕ್ಕೆ ಮೀಸಲಾಗಿವೆ. ಹುದ್ದೆಗಳಲ್ಲಿನ ಪ್ರಮುಖ ವಿಭಾಗಗಳಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಹಾಗೂ ಸಹಾಯಕ ಪ್ರಾಧ್ಯಾಪಕರು ಸೇರಿದ್ದಾರೆ.

ಪ್ರಾಧ್ಯಾಪಕರಿಗೆ 21 ಹುದ್ದೆಗಳು ಲಭ್ಯವಿದ್ದು, ವೇತನ ಶ್ರೇಣಿ 1,44,200 ರಿಂದ 2,18,200 ರೂ. ರವರೆಗೆ ಇದೆ. ಸಹ ಪ್ರಾಧ್ಯಾಪಕರಿಗೆ 40 ಹುದ್ದೆಗಳು ಇದ್ದು, 1,31,400 ರಿಂದ 2,17,100ರೂ. ವೇತನ ನೀಡಲಾಗುತ್ತದೆ. ಸಹಾಯಕ ಪ್ರಾಧ್ಯಾಪಕರಿಗೆ 78 ಹುದ್ದೆಗಳು ಲಭ್ಯವಿದ್ದು, 57,700 ರಿಂದ 1,82,400 ರೂ. ರವರೆಗೆ ವೇತನ ಸಿಗುತ್ತದೆ. ಈ ಹುದ್ದೆಗಳಲ್ಲಿನ ಬಹುಪಾಲು ಸ್ಥಾನಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾಗಿವೆ.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಈ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಧಿಸೂಚನೆ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಲಿಖಿತವಾಗಿ ಕುಲಸಚಿವರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿಗಳನ್ನು “ಕುಲಸಚಿವರು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಜ್ಞಾನ ಸಾಗರ ಆವರಣ, ವಿನಾಯಕ ನಗರ, ಕಂಟೋನ್ಮೆಂಟ್, ಬಳ್ಳಾರಿ – 583105” ವಿಳಾಸಕ್ಕೆ ಕಳುಹಿಸಬಹುದು.

ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ವಲಯದಲ್ಲಿ ಬೋಧನಾ ಕ್ಷೇತ್ರದಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ಪ್ರಕಟಣೆಯನ್ನು ಪರಿಶೀಲಿಸುವುದು ಸೂಕ್ತ.

New Project (22)

New Project (22)

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Wed, 4 February 26

Follow Us