WCD Bagalkot Recruitment 2024:ಬಾಗಲಕೋಟೆ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಹತಾ ಮಾನದಂಡಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

WCD Bagalkot Recruitment 2024:ಬಾಗಲಕೋಟೆ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಉದ್ಯೋಗ ಮಾಹಿತಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 26, 2024 | 12:38 PM

ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದ ಮಹಿಳೆಯರು ಉದ್ಯೋಗದ ಹುಡುಕಾಟದಲ್ಲಿದ್ದರೆ ಅಂತಹವರಿಗೊಂದು ಸುವರ್ಣಾವಕಾಶವಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ಇದೀಗ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಈ ಕೆಳಕಂಡ ಅರ್ಹತಾ ಮಾನದಂಡಗಳನ್ನು ಒಳಗೊಂಡಿರುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ

* ಉದ್ಯೋಗ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

* ಹುದ್ದೆಗಳ ಹೆಸರು : ಕಾರ್ಯಕರ್ತೆ, ಸಹಾಯಕಿ

* ಒಟ್ಟು ಹುದ್ದೆಗಳ ಸಂಖ್ಯೆ : 577

* ಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ : 106

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ : 471

ಪ್ರಮುಖ ದಿನಾಂಕಗಳು :

*ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಅಕ್ಟೋಬರ್‌ 16, 2024

* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್‌ 15, 2024

ಅರ್ಹ ಅಭ್ಯರ್ಥಿಗಳಿಗೆ ಇರಬೇಕಾದ ಮಾನದಂಡಗಳು

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಡೆದಿರಬೇಕು.

* ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಆಗಿರಬೇಕು.

* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.

* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಇದನ್ನೂ ಓದಿ: SSLC ಪಾಸಾಗಿದ್ದವರಿಗೆ ಯಂತ್ರ ಇಂಡಿಯಾ ಲಿಮಿಟೆಡ್​​​ನಲ್ಲಿ ಉದ್ಯೋಗ ಲಭ್ಯ, ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಹೊಂದಿರಲೇಬೇಕಾದ ಅಗತ್ಯ ದಾಖಲೆಗಳು

* ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ

* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ

* ವಾಸಸ್ಥಳ ದೃಢೀಕರಣ ಪತ್ರ

* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ

* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ

* ಇತರೆ ಅಗತ್ಯ ದಾಖಲೆಗಳು

ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

* ಮೊದಲಿಗೆ “karnemakaone.kar.nic.in/abcd/ApplicationForm_JA_org.aspx” ವೆಬ್‌ಗೆ ಭೇಟಿ ನೀಡಿ.

* ಹುದ್ದೆ ಬಯಸುವ ಜಿಲ್ಲೆ ಬಾಗಲಕೋಟೆ >> ತಾಲ್ಲೂಕು >> ಅಧಿಸೂಚನೆ ಸಂಖ್ಯೆ >> ಹುದ್ದೆ’ ಆಯ್ಕೆ ಮಾಡಿ.

* ಆ ಬಳಿಕ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿದರೆ ಆನ್‌ಲೈನ್‌ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

* ಈ ಅರ್ಜಿಯಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಗಳನ್ನು ಭರ್ತಿ ಮಾಡಿ.

* ಅಗತ್ಯ ದಾಖಲೆಗಳ ಆಯಾ ಹೆಸರಿರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಿ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..
ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..
ಚಿನ್ನ ಖರೀದಿಸಿದರೆ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗುತ್ತಾ?
ಚಿನ್ನ ಖರೀದಿಸಿದರೆ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗುತ್ತಾ?
ವೈಲ್ಡ್ ಕಾರ್ಡ್​ ಸ್ಪರ್ಧಿ ಶೋಭಾ ಶೆಟ್ಟಿಗೆ ಆರಂಭದಲ್ಲೇ ಆಘಾತ; ಬಿದ್ದ ನಟಿ
ವೈಲ್ಡ್ ಕಾರ್ಡ್​ ಸ್ಪರ್ಧಿ ಶೋಭಾ ಶೆಟ್ಟಿಗೆ ಆರಂಭದಲ್ಲೇ ಆಘಾತ; ಬಿದ್ದ ನಟಿ