WCD Chamarajanagar Recruitment 2024 :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 207 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 207 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ ತಿಂಗಳೊಳಗೆ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ವಿವರ, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

WCD Chamarajanagar Recruitment 2024 :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 207 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 06, 2024 | 12:21 PM

ಉದ್ಯೋಗ ಹುಡುಕಾಟದಲ್ಲಿರುವ ಮಹಿಳೆಯರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 207 ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 27 ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಬಹುದು.

ಹುದ್ದೆಗಳ ವಿವರ

* ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.

* ಅಂಗನವಾಡಿ ಕಾರ್ಯಕರ್ತೆಯರು : 80 ಹುದ್ದೆಗಳು

* ಅಂಗನವಾಡಿ ಸಹಾಯಕಿಯರು : 127 ಹುದ್ದೆಗಳು

* ಉದ್ಯೋಗ ಸ್ಥಳ : ಚಾಮರಾಜನಗರ (ಕರ್ನಾಟಕ)

ವಯಸ್ಸಿನ ಮಿತಿ:

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

* ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ ಹಾಗೂ ಆಯ್ಕೆ ಪ್ರಕ್ರಿಯೆ

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. (ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು).

* ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ ಎಸ್ ಎಲ್ ಸಿ /ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

* ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುತ್ತಿರಬೇಕು.

* ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಶುಲ್ಕ:

* ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-11-2024.

* ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 27-11-2024.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Wed, 6 November 24

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ