AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCD Chikkaballapur Recruitment 2025: 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು

ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ಅಥವಾ ಪಿಯುಸಿ ಪಾಸಾದ 19-35 ವರ್ಷದ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಿ.

WCD Chikkaballapur Recruitment 2025: 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆ
ಅಕ್ಷತಾ ವರ್ಕಾಡಿ
|

Updated on: Sep 27, 2025 | 5:51 PM

Share

ಚಿಕ್ಕಬಳ್ಳಾಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

WCD ಚಿಕ್ಕಬಳ್ಳಾಪುರ ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ (WCD Chikkaballapur)
  • ಹುದ್ದೆಗಳ ಸಂಖ್ಯೆ: 274
  • ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ
  • ಪೋಸ್ಟ್ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

ಹುದ್ದೆಯ ವಿವರಗಳು:

ಯೋಜನೆಯ ಹೆಸರು ಹುದ್ದೆಗಳ ಸಂಖ್ಯೆ (ಅಂಗನವಾಡಿ ಕಾರ್ಯಕರ್ತೆ)  ಹುದ್ದೆಗಳ ಸಂಖ್ಯೆ (ಅಂಗನವಾಡಿ ಸಹಾಯಕಿ)
ಬಾಗೇಪಲ್ಲಿ 5 47
ಚಿಕ್ಕಬಳ್ಳಾಪುರ 3 37
ಚಿಂತಾಮಣಿ 14 63
ಗುಡಿಬಂಡೆ – 7
ಶಿಡ್ಲಘಟ್ಟ 3 48
ಗೌರಿಬಿದನೂರು 8 39

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: WCD ಚಿಕ್ಕಬಳ್ಳಾಪುರ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ ಅಥವಾ ಪಿಯುಸಿ ಪೂರ್ಣಗೊಳಿಸಿರಬೇಕು.
  • ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.
ಪೋಸ್ಟ್ ಹೆಸರು  ಅರ್ಹತೆ
ಅಂಗನವಾಡಿ ಕಾರ್ಯಕರ್ತೆ ಪಿಯುಸಿ
ಅಂಗನವಾಡಿ ಸಹಾಯಕಿ  10 ತರಗತಿ

ಇದನ್ನೂ ಓದಿ: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ WCD ಚಿಕ್ಕಬಳ್ಳಾಪುರ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ .(WCD-Chikkaballapur-Guideline-Notification)
  • WCD ಚಿಕ್ಕಬಳ್ಳಾಪುರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • WCD ಚಿಕ್ಕಬಳ್ಳಾಪುರ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆಯನ್ನು ಕ್ಯಾಪ್ಚರ್​ ಮಾಡಿ ಇಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್