AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿಗಳಲ್ಲಿ ಉದ್ಯೋಗಾವಕಾಶ: 4ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಿ

Recruitment 2022: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ (ಎಸ್​ಎಸ್​ಎಲ್​ಸಿ) ಪಾಸ್ ಆಗಿರಬೇಕು. ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಉತ್ತೀರ್ಣರಾಗಿರಬೇಕು. ಹಾಗೆಯೇ 9ನೇ ತರಗತಿಯವರೆಗೆ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು.

ಅಂಗನವಾಡಿಗಳಲ್ಲಿ ಉದ್ಯೋಗಾವಕಾಶ: 4ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 02, 2022 | 6:52 PM

Share

ಬೀದರ್ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿಯಿರುವ ಹಲವು ಹುದ್ದೆಗಳ ನೇಮಕಾತಿ ಪ್ರಕಟಿಸಲಾಗಿದೆ. ಈ ವಿಭಾಗದಲ್ಲಿ 28 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 66 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದ ಬೀದರ್ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು ಮತ್ತು ಒಟ್ಟು ಹುದ್ದೆಗಳು: ಅಂಗನವಾಡಿ ಕಾರ್ಯಕರ್ತೆ- 28 ಹುದ್ದೆಗಳು ಅಂಗನವಾಡಿ ಸಹಾಯಕಿ – 66 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ- 94

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ (ಎಸ್​ಎಸ್​ಎಲ್​ಸಿ) ಪಾಸ್ ಆಗಿರಬೇಕು. ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಉತ್ತೀರ್ಣರಾಗಿರಬೇಕು. ಹಾಗೆಯೇ 9ನೇ ತರಗತಿಯವರೆಗೆ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು. 10ನೇ ತರಗತಿಗಿಂತ ಹೆಚ್ಚಿನ ಶಿಕ್ಷಣ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳು: -ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ -ವಾಸಸ್ಥಳ ದೃಢೀಕರಣ ಪತ್ರ. -ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ. -ಮೀಸಲಾತಿ ಇದ್ದರೆ, ಅದರ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ. – ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ. -ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಅದರ ಪ್ರಮಾಣ ಪತ್ರ. -ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ. -ಅಂಗವಿಕಲರಾಗಿದ್ದಲ್ಲಿ ಅದರ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸುವುದು ಹೇಗೆ? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ www.anganwadirecruitment.kar.nic.in ಗೆ ಭೇಟಿ ನೀಡಿ. ಅಲ್ಲಿ ಬೀದರ್ ಜಿಲ್ಲೆಯನ್ನು ಆಯ್ಕೆ ಮಾಡಿ ಅರ್ಜಿ ಭರ್ತಿ ಮಾಡಿ. ಅಲ್ಲದೆ ನೀವು ನೀಡಬೇಕಾದ ದಾಖಲೆಗಳನ್ನು ಅಪ್​ಲೋಡ್ ಮಾಡಿ. ಸಬ್​ಮಿಟ್​ ಬಟನ್​ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 01-01-2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-01-2022

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  South Africa vs India: ಭಾರತ- ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(WCD Karnataka Anganwadi Recruitment 2022)

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ