Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪಾಸಾಗಿರಬೇಕು. ಹಾಗೆಯೇ ಸಹಾಯಕಿ ಹುದ್ದೆಗಳಿಗೆ 4 ರಿಂದ 9ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊಡಗು ಜಿಲ್ಲೆಯ ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 52 ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು anganwadirecruit.kar.nic.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರ: ಹುದ್ದೆಗಳ ಸಂಖ್ಯೆ: 52 ಉದ್ಯೋಗ ಸ್ಥಳ: ಕೊಡಗು – ಕರ್ನಾಟಕ ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಅಂಗನವಾಡಿ ಕಾರ್ಯಕರ್ತೆ- 11 ಹುದ್ದೆಗಳು ಅಂಗನವಾಡಿ ಸಹಾಯಕಿ- 41 ಹುದ್ದೆಗಳು
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 4 ರಿಂದ 9ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಗು ನೇಮಕಾತಿ ಅಧಿಸೂಚನೆಯ ಪ್ರಕಾರ, 29-Mar-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ.
ವೇತನ: ವೇತನ: ರೂ.5250-10000/- ಪ್ರತಿ ತಿಂಗಳು
ಅರ್ಜಿ ಸಲ್ಲಿಸುವುದು ಹೇಗೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ anganwadirecruit.kar.nic.inಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 29, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(WCD Kodagu Recruitment 2022 – Apply 52 Anganwadi Worker)