Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Feb 28, 2022 | 9:17 PM

Anganwadi Recruitment 2022: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪಾಸಾಗಿರಬೇಕು. ಹಾಗೆಯೇ ಸಹಾಯಕಿ ಹುದ್ದೆಗಳಿಗೆ 4 ರಿಂದ 9ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Anganwadi Recruitment 2022
Follow us on

ಕೊಡಗು ಜಿಲ್ಲೆಯ ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 52 ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು anganwadirecruit.kar.nic.in ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರ:
ಹುದ್ದೆಗಳ ಸಂಖ್ಯೆ: 52
ಉದ್ಯೋಗ ಸ್ಥಳ: ಕೊಡಗು – ಕರ್ನಾಟಕ
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಅಂಗನವಾಡಿ ಕಾರ್ಯಕರ್ತೆ- 11 ಹುದ್ದೆಗಳು
ಅಂಗನವಾಡಿ ಸಹಾಯಕಿ- 41 ಹುದ್ದೆಗಳು

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 4 ರಿಂದ 9ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಗು ನೇಮಕಾತಿ ಅಧಿಸೂಚನೆಯ ಪ್ರಕಾರ, 29-Mar-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ.

ವೇತನ:
ವೇತನ: ರೂ.5250-10000/- ಪ್ರತಿ ತಿಂಗಳು

ಅರ್ಜಿ ಸಲ್ಲಿಸುವುದು ಹೇಗೆ :
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ anganwadirecruit.kar.nic.inಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 29, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(WCD Kodagu Recruitment 2022 – Apply 52 Anganwadi Worker)