Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Anganwadi Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಉಡುಪಿ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 3 ಅಂಗನವಾಡಿ ಕಾರ್ಯಕರ್ತೆ ಮತ್ತು 22 ಸಹಾಯಕಿಯರನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಅಂಗನವಾಡಿ ಕಾರ್ಯಕರ್ತೆ- 3 ಹುದ್ದೆಗಳು
- ಅಂಗನವಾಡಿ ಸಹಾಯಕಿ- 22 ಹುದ್ದೆಗಳು
ವಿದ್ಯಾರ್ಹತೆ:
- ಎಸ್ಎಸ್ಎಲ್ಸಿ ಪಾಸಾದವರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
- ಇನ್ನು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ಓದಿರಬೇಕು. ಅಂದರೆ ಎಸ್ಎಸ್ಎಲ್ಸಿ ಪಾಸಾದವರು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ.
ವಯೋಮಿತಿ : 18 ರಿಂದ 35 ವರ್ಷದವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆಯ ಆದ್ಯತೆ: ಈ ಹುದ್ದೆಗಳಿಗೆ ಸ್ಥಳೀಯರ ಆಯ್ಕೆಗೆ ಆದ್ಯತೆ ನೀಡಲಾಗಿದೆ. ಇನ್ನು ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ, ಅವರಿಗೆ ಈ ಉದ್ಯೋಗ ಸಿಗಲಿದೆ. ಅಂದರೆ ಇತರರಿಗಿಂತ ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಮೊದಲ ಆದ್ಯತೆ ಇರಲಿದೆ.
ಇದಲ್ಲದೆ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ನಂತರವಷ್ಟೇ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಹಾಗೆಯೇ ವಿಕಲಚೇತನ ಅಭ್ಯರ್ಥಿಗಳನ್ನು ಕೂಡ ಆದ್ಯತೆಗೆ ಪರಿಗಣಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ anganwadirecruit.kar.nic.in ಗೆ ಹೋಗಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 20 (ಸಂಜೆ 5.30 ರೊಳಗೆ)
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.