Railway Recruitment 2022: ರೈಲ್ವೆ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Nov 29, 2022 | 8:15 AM

WCR Apprentice Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Railway Recruitment 2022: ರೈಲ್ವೆ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ
Railway Recruitment 2022
Follow us on

Railway Recruitment 2022: ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೆ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 2521
JBP ವಿಭಾಗ- 884 ಹುದ್ದೆಗಳು
BPL ವಿಭಾಗ- 614 ಹುದ್ದೆಗಳು
ಕೋಟಾ ವಿಭಾಗ- 685 ಹುದ್ದೆಗಳು
WRS ಕೋಟಾ- 160 ಹುದ್ದೆಗಳು
CRWS BPL- 158 ಹುದ್ದೆಗಳು
HQ JBP- 20 ಹುದ್ದೆಗಳು

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, NCVT/SCVT ನೀಡಿದ ಅಧಿಸೂಚಿತ ವಿಷಯದಲ್ಲಿ ನ್ಯಾಷನಲ್ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.

ಇದನ್ನೂ ಓದಿ: IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 100 ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • – 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ITI/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.
  • – ಹೀಗೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.