Railway Recruitment 2022: SSLC ಪಾಸಾದವರಿಗೆ ಸುರ್ವಣಾವಕಾಶ: ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Western Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಶ್ಚಿಮ ರೈಲ್ವೆಯ rrc-wr.com ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Railway Recruitment 2022: ಪಶ್ಚಿಮ ರೈಲ್ವೆ ವಿವಿಧ ವಿಭಾಗಗಳು, ಕಾರ್ಯಾಗಾರಗಳಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಶ್ಚಿಮ ರೈಲ್ವೆಯ rrc-wr.com ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಒಟ್ಟು ಹುದ್ದೆಗಳ ಸಂಖ್ಯೆ- 3612
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಸಂಬಂಧಿತ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ರಿಂದ 24 ವರ್ಷಗಳ ಒಳಗಿರಬೇಕು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 27, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ (SECR) ಇಲಾಖೆಯಲ್ಲೂ ಇದೆ ಉದ್ಯೋಗಾವಕಾಶ:
SECR Recruitment 2022: ಭಾರತ ಸರ್ಕಾರದ ರೈಲ್ವೆ ಇಲಾಖೆಯ ಸೌತ್ ಈಸ್ಟ್ ಸೆಂಟ್ರಲ್ ರೈಲ್ವೇ (SECR) ನಾಗಪುರ ವಿಭಾಗದ ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 1044
ಪೋಸ್ಟ್ ವಿವರಗಳು: ಅಪ್ರೆಂಟಿಸ್ ಹುದ್ದೆಗಳು
ಹುದ್ದೆಯ ವಿವರಗಳು: ನಾಗ್ಪುರ ವಿಭಾಗದಲ್ಲಿ- 980 ಹುದ್ದೆಗಳು ಮೋತಿಬಾಗ್ ವಿಭಾಗದಲ್ಲಿ- 64 ಹುದ್ದೆಗಳು
ಹುದ್ದೆಗಳ ಹೆಸರು: ಫಿಟ್ಟರ್, ಕಾರ್ಪೆಂಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ವೈರ್‌ಮ್ಯಾನ್, ಮೆಷಿನಿಸ್ಟ್, ಟರ್ನರ್, ಡಿಜಿಟಲ್ ಫೋಟೋಗ್ರಾಫರ್, ಹೆಲ್ತ್ ಸ್ಯಾನಿಟರಿ ಇನ್‌ಸ್ಪೆಕ್ಟರ್, ಗ್ಯಾಸ್ ಕಟ್ಟರ್, ಸ್ಟೆನೋಗ್ರಾಫರ್, ಕೇಬಲ್ ಜೊಯಿಂಟರ್ ಇತ್ಯಾದಿ.
ವಯೋಮಿತಿ: ಅಭ್ಯರ್ಥಿಗಳು ಮೇ 1, 2022 ರೊಳಗೆ 15 ರಿಂದ 24 ವರ್ಷ ವಯಸ್ಸಿನವರಾಗಿರಬೇಕು.
ವಿದ್ಯಾರ್ಹತೆ: ಹತ್ತನೇ ತರಗತಿ ಪಾಸಾಗಿರಬೇಕು. ಜೊತೆಗೆ ಸಂಬಂಧಪಟ್ಟ ವಿಭಾಗದಲ್ಲಿ ಐಟಿಐ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 3, 2022.
ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.