WRD Karnataka SDA Recruitment 2022: ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿದೆ ಉದ್ಯೋಗಾವಕಾಶ: ವೇತನ 42 ಸಾವಿರ ರೂ.
WRD Karnataka SDA Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಲ ಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್ ಸೈಟ್ Waterresources.Karnataka.Gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
WRD Karnataka SDA Recruitment 2022: ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯಲ್ಲಿನ 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಲ ಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್ ಸೈಟ್ Waterresources.Karnataka.Gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 155
ಅರ್ಹತಾ ಮಾನದಂಡ: ಈ ಹುದ್ದೆಗಳಿಗೆ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಮತ್ತು ವಿಶ್ವವಿದ್ಯಾಲಯದಿಂದ ಪಿಯುಸಿ, ಡಿಪ್ಲೋಮಾ, ಐಟಿಐ ಮಾಡಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಠ 40 ವರ್ಷದಳೊಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮಾಸಿಕ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 21,400/- ರಿಂದ 42,000/-ರೂ.ವರೆಗೆ ಸಂಬಳ ನಿಗದಿ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 25, 2022
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಅಂದು ಯಾವುದೇ ಅರ್ಜಿ ಶುಲ್ಕ ನೀಡಬೇಕಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಿದೆ.
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.