AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ವೃತ್ತಿ ಜೀವನಕ್ಕೆ 10 ವರ್ಷ; ಇಲ್ಲಿದೆ ಕರಿಯರ್ ವಿವರ

ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಸೋಲೋ ಹೀರೋ ಆಗಿ ಚಿತ್ರರಂಗದಲ್ಲಿ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣವು ಅವರ ಸಿನಿ ಬದುಕಿನ ಪ್ರಮುಖ ಮೈಲಿಗಲ್ಲಾಗಿದೆ. ಕೇವಲ ಒಂದು ದಶಕದಲ್ಲೇ ಅವರು ತೆಲುಗು ಚಿತ್ರರಂಗದಲ್ಲಿ ತಮಗಾಗಿಯೇ ಒಂದು ಗಟ್ಟಿಯಾದ ಸ್ಥಾನವನ್ನು ನಿರ್ಮಿಸಿಕೊಂಡು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ವಿಜಯ್ ದೇವರಕೊಂಡ ವೃತ್ತಿ ಜೀವನಕ್ಕೆ 10 ವರ್ಷ; ಇಲ್ಲಿದೆ ಕರಿಯರ್ ವಿವರ
ವಿಜಯ್ ದೇವರಕೊಂಡ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 30, 2026 | 8:09 AM

Share

ಮುಖ್ಯಾಂಶಗಳು

  • ಪೆಳ್ಳಿ ಚೂಪುಲು ಟು ಕಿಂಗ್ಡಮ್
  • ವಿಜಯ್ ದೇವರಕೊಂಡ ದಶಕದ ಪಯಣ
  • ಸೋಶಿಯಲ್ ಮೀಡಿಯಾ ಆಳುವ ರೌಡಿ ಬಾಯ್ ಕ್ರೇಜ್

ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಸೋಲೋ ಹೀರೋ ಆಗಿ ಚಿತ್ರರಂಗದಲ್ಲಿ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣವು ಅವರ ಸಿನಿ ಬದುಕಿನ ಅತ್ಯಂತ ಪ್ರಮುಖ ಮೈಲಿಗಲ್ಲಾಗಿದೆ. ಕೇವಲ ಒಂದು ದಶಕದಲ್ಲೇ ಅವರು ತೆಲುಗು ಚಿತ್ರರಂಗದಲ್ಲಿ ತಮಗಾಗಿಯೇ ಒಂದು ಗಟ್ಟಿಯಾದ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ. ಅವರ ನಟನೆ ಹಾಗೂ ವಿಶಿಷ್ಟ ಶೈಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದೆ.

ಅರ್ಜುನ್ ರೆಡ್ಡಿ ಕೊಟ್ಟ ಬ್ರೇಕ್

2016ರಲ್ಲಿ ತೆರೆಕಂಡ ‘ಪೆಳ್ಳಿ ಚೂಪುಲು’ ಸಿನಿಮಾ ಮೂಲಕ ವಿಜಯ್ ಅವರ ನಾಯಕ ನಟನ ಜರ್ನಿ ಆರಂಭವಾಯಿತು. ಆ ಬಳಿಕ ಬಂದ ‘ಅರ್ಜುನ್ ರೆಡ್ಡಿ’ ಸಿನಿಮಾ ಇವರ ಚಿತ್ರಜೀವನವನ್ನೇ ಸಂಪೂರ್ಣವಾಗಿ ಬದಲಾಯಿಸಿತು. ಈ ಚಿತ್ರವು ವಿಜಯ್ ದೇವರಕೊಂಡ ಅವರನ್ನು ಇಡೀ ಚಿತ್ರರಂಗದಲ್ಲೇ ಅತ್ಯಂತ ಜನಪ್ರಿಯ ಯುವ ನಟನನ್ನಾಗಿ ಮಾಡಿತು.

ಸರಣಿ ಹಿಟ್‌ಗಳ ಸರದಾರ

‘ಅರ್ಜುನ್ ರೆಡ್ಡಿ’ ಯಶಸ್ಸಿನ ನಂತರ ವಿಜಯ್ ದೇವರಕೊಂಡ ಹಿಂದಿರುಗಿ ನೋಡಲಿಲ್ಲ. ‘ಗೀತಾ ಗೋವಿಂದಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೀಪಟ ಮಾಡಿದವು. ಇತ್ತೀಚೆಗೆ ಬಂದ ‘ಖುಷಿ’, ‘ಫ್ಯಾಮಿಲಿ ಸ್ಟಾರ್’ ಹಾಗೂ ‘ಕಿಂಗ್ಡಮ್’ ಚಿತ್ರಗಳು ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿದವು. ಈ ಚಿತ್ರಗಳು ಇವರ ಅಭಿಮಾನಿ ಬಳಗವನ್ನು ಮತ್ತಷ್ಟು ಗಟ್ಟಿಗೊಳಿಸಿದವು.

ಯುವ ಸಮೂಹದ ಕ್ರೇಜ್

ವಿಜಯ್ ದೇವರಕೊಂಡ ಅವರಿಗೆ ಯುವ ಪ್ರೇಕ್ಷಕರಲ್ಲಿ ಅಗಾಧವಾದ ಬೇಡಿಕೆಯಿದೆ. ಇದುವೇ ಅವರ ಸಿನಿಮಾ ರಂಗದ ಅತಿ ದೊಡ್ಡ ಶಕ್ತಿಯಾಗಿದೆ. ಅವರ ಹೊಸ ಸಿನಿಮಾಗಳ ಘೋಷಣೆ, ಫಸ್ಟ್ ಲುಕ್ ಮತ್ತು ಸಂದರ್ಶನಗಳು ಸೋಷಿಯಲ್ ಮೀಡಿಯಾದಲ್ಲಿ ಸದಾ ಸದ್ದು ಮಾಡುತ್ತವೆ. ಏರಿಳಿತಗಳ ನಡುವೆಯೂ ಅವರ ಮುಂದಿನ ಚಿತ್ರಗಳ ಮೇಲಿನ ನಿರೀಕ್ಷೆ ಎಂದೂ ಕಡಿಮೆಯಾಗಿಲ್ಲ.

ಬಿಸಿನೆಸ್ ಹಾಗೂ ಸಮಾಜ ಸೇವೆ

ನಟನೆಯ ಜೊತೆಗೆ ವಿಜಯ್ ಅವರು ಉದ್ಯಮ ರಂಗಕ್ಕೂ ಕಾಲಿಟ್ಟಿದ್ದಾರೆ. ‘ರೌಡಿ ವೇರ್’ ಎಂಬ ಸ್ವಂತ ಬಟ್ಟೆ ಬ್ರ್ಯಾಂಡ್ ಆರಂಭಿಸಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ‘ದಿ ದೇವರಕೊಂಡ ಫೌಂಡೇಶನ್’ ಮೂಲಕ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಈ ಸಂಸ್ಥೆಯ ಅಡಿಯಲ್ಲಿ ಅವರು ಹಲವು ಬಡ ಕುಟುಂಬಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk