AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16ನೇ ಬೆಂಗಳೂರು ಸಿನಿಮೋತ್ಸವಕ್ಕೆ ನಿಮ್ಮ ಸಿನಿಮಾ ಕಳಿಸೋದು ಹೇಗೆ? ನಿಯಮಗಳು ಏನು?

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡ, ಭಾರತೀಯ ಮತ್ತು ಏಷ್ಯನ್ ಸಿನಿಮಾ ಸ್ಪರ್ಧಾ ವಿಭಾಗಗಳಿಗೆ ಸಿನಿಮಾಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 1ರಿಂದ 8ರ ತನಕ ಈ ಬಾರಿಯ ಫಿಲ್ಮ್​ ಫಿಸ್ಟಿವಲ್ ನಡೆಯಲಿದೆ. ಸಿನಿಮಾಗಳ ಆಯ್ಕೆಗೆ ಇರುವ ಮಾನದಂಡಗಳು ಏನು ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

16ನೇ ಬೆಂಗಳೂರು ಸಿನಿಮೋತ್ಸವಕ್ಕೆ ನಿಮ್ಮ ಸಿನಿಮಾ ಕಳಿಸೋದು ಹೇಗೆ? ನಿಯಮಗಳು ಏನು?
Bengaluru Film Festival
ಮದನ್​ ಕುಮಾರ್​
|

Updated on: Jan 10, 2025 | 8:47 PM

Share

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಕರ್ನಾಟಕ ಸರ್ಕಾರದ ಮಹತ್ವದ ಸಾಂಸ್ಕೃತಿಕ ಹಬ್ಬವಾಗಿದೆ. ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಮೂಲಕ 2025ರ ಮಾರ್ಚ್ 1ರಿಂದ 8ರವರೆಗೆ ಹಮ್ಮಿಕೊಂಡಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ‘ಸರ್ವಜನಾಂಗದ ಶಾಂತಿಯ ತೋಟ’ ಎಂಬ ಘೋಷವಾಕ್ಯದಡಿ ಚಲನಚಿತ್ರೋತ್ಸವ ಜರುಗಲಿದೆ. ಪ್ರತಿ ಬಾರಿಯಂತೆ ಈ ವರ್ಷ ಕೂಡ ‘ಕನ್ನಡ ಸಿನಿಮಾ’ ಸ್ಪರ್ಧೆ, ಭಾರತೀಯ ಚಿತ್ರಗಳನ್ನು ಪ್ರತಿನಿಧಿಸುವ ‘ಚಿತ್ರಭಾರತಿ’ ಹಾಗೂ ‘ಏಷಿಯನ್ ಸಿನಿಮಾ’ ಸ್ಪರ್ಧಾ ವಿಭಾಗಗಳಿಗೆ ಆಯ್ಕೆಗಾಗಿ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.

​‘ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ’ದಲ್ಲಿ ಆಯ್ಕೆಗಾಗಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯಾಗಿದ್ದು, 2024ರ ಜನವರಿ 1ರಿಂದ 2024ರ ಡಿಸೆಂಬರ್ 31ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು. ಕನ್ನಡ ಮತ್ತು ಕರ್ನಾಟಕ ರಾಜ್ಯದ ಯಾವುದೇ ಉಪಭಾಷೆಯಲ್ಲಿ ತಯಾರಾಗಿರುವ ಕಥಾ ಚಿತ್ರಗಳು, ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ.

​‘ಚಿತ್ರಭಾರತಿ’ ಭಾರತೀಯ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಆಯ್ಕೆಗಾಗಿ ಸಲ್ಲಿಸಲಿರುವ ಚಿತ್ರಗಳು ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು ಹಾಗೂ ಭಾರತದ ಯಾವುದೇ ಭಾಷೆಯ ಕಥಾ ಚಿತ್ರವಾಗಿದ್ದು, ಕನಿಷ್ಠ 70 ನಿಮಿಷಗಳ ಅವಧಿಯ ಚಿತ್ರಗಳು ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತದೆ.

‘ಏಷಿಯಾ ಸಿನಿಮಾ ಸ್ಪರ್ಧಾ ವಿಭಾಗ’ಕ್ಕೆ, ಏಷಿಯಾದ ಯಾವುದೇ ದೇಶದಲ್ಲಿ, ಜನವರಿ 1, 2024ರಿಂದ ಡಿಸೆಂಬರ್ 31, 2024ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ತಯಾರಾದ, ಕನಿಷ್ಠ 70 ನಿಮಿಷಗಳ ಅವಧಿಯ ಚಲನಚಿತ್ರಗಳು ಸ್ಪರ್ಧಾತ್ಮಕ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ. ‘ಕನ್ನಡ ಚಲನಚಿತ್ರ’, ‘ಚಿತ್ರಭಾರತಿ’ (ಭಾರತೀಯ ಚಲನಚಿತ್ರ) ಮತ್ತು ‘ಏಷಿಯನ್‌ ಚಲನಚಿತ್ರ’ ವಿಭಾಗಕ್ಕೆ ಪ್ರವೇಶ ಬಯಸುವ ಭಾರತೀಯ ಭಾಷಾ ಚಲನಚಿತ್ರಗಳಿಗೆ, ಕೇಂದ್ರೀಯ ಚಲನಚಿತ್ರ ಪ್ರಮಾಣೀಕೃತ ಮಂಡಳಿ ನೀಡುವ ಪ್ರಮಾಣ ಪತ್ರದಲ್ಲಿ ನಮೂದಾಗುವ ದಿನಾಂಕವೇ ನಿರ್ಮಾಣದ ಮಾನದಂಡವಾಗುತ್ತದೆ.

ಇದನ್ನೂ ಓದಿ: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ನಟ ಕಿಶೋರ್ ರಾಯಭಾರಿ

​16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗಗಳಲ್ಲಿ ಆಯ್ಕೆಗಾಗಿ ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ದಿನಾಂಕ: 09.01.2025 ರಿಂದ ಪ್ರಾರಂಭವಾಗಿದ್ದು, ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಸಲು www.biffes.org ಜಾಲತಾಣಕ್ಕೆ ಭೇಟಿ ನೀಡಿ. ಅರ್ಜಿಯೊಂದಿಗೆ ಸಿನಿಮಾಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನೂ ನೀಡಬೇಕು. ‘ಕನ್ನಡ ಸಿನಿಮಾ’, ‘ಚಿತ್ರಭಾರತಿ’, ಸ್ಪರ್ಧಾ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಪ್ರತಿ ಚಿತ್ರಕ್ಕೂ ರೂ. 3 ಸಾವಿರ ರೂಪಾಯಿ ಪ್ರವೇಶ ಶುಲ್ಕವಿರುತ್ತದೆ. ಇಂಗ್ಲಿಷ್ ಉಪಶೀರ್ಷಿಕೆಗಳನ್ನೊಳಗೊಂಡ ಚಲನಚಿತ್ರದ ಆನ್‌ಲೈನ್ ಸ್ಕ್ರೀನರ್‌ನೊಂದಿಗೆ, ಆನ್‌ಲೈನ್‌ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.01.2025. ಹೆಚ್ಚಿನ ಮಾಹಿತಿಗೆ: +91 8904645529 ಅಥವಾ biffesblr@gmail.com & www.biffes.org ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?