ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​

Updated on: Jun 18, 2021 | 8:56 AM

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ ನಟ ಅಕ್ಷಯ್​ ಕುಮಾರ್​. ದೇಶದ ಬಗ್ಗೆ ಅವರಿಗೆ ಅಪಾರ ಗೌರವ. ಹಾಗಾಗಿ ಮತ್ತೆ ಮತ್ತೆ ಅವರು ದೇಶಭಕ್ತಿ ಸಿನಿಮಾಗಳನ್ನು ಮಾಡುತ್ತಾರೆ. ಬರೀ ಸಿನಿಮಾದಲ್ಲಿ ದೇಶಭಕ್ತಿ ತೋರಿಸುವುದು ಮಾತ್ರವಲ್ಲದೆ, ದೇಶಕ್ಕೆ ಕಷ್ಟ ಬಂದಾಗ ಅವರು ತಕ್ಷಣ ಸ್ಪಂದಿಸುತ್ತಾರೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಪಿಎಂ​ ಕೇರ್ಸ್​ ಫಂಡ್​ಗೆ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್​ ಕುಮಾರ್​ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್​ಎಫ್​ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್​ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಅವರ ಎಲ್ಲರ ಮನ ಗೆದ್ದರು.

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ‘ಸೂರ್ಯವಂಶಿ’ ಚಿತ್ರದ ಬಿಡುಗಡೆಯು ಲಾಕ್​ಡೌನ್​ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್​ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್​ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us