AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೇಲರ್ ಮೂಲಕ ಭಯ ಹುಟ್ಟಿಸಿದ ‘418’ ಹಾರರ್ ಸಿನಿಮಾ ಟ್ರೇಲರ್

ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 23ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ‘418’ ಸಿನಿಮಾ ಬಿಡುಗಡೆ ಆಗಲಿದೆ. ಚೈತ್ರಾ ಆಚಾರ್ ನಟನೆಯ ಈ ಸಿನಿಮಾಗೆ ಕೀರ್ತನ್ ನಾಡಗೌಡ ನಿರ್ದೇಶನ ಮಾಡಿದ್ದಾರೆ. ಈ ಹಾರರ್ ಕಥಾಹಂದರದ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ನಿರೀಕ್ಷೆ ಇದೆ.

ಟ್ರೇಲರ್ ಮೂಲಕ ಭಯ ಹುಟ್ಟಿಸಿದ ‘418’ ಹಾರರ್ ಸಿನಿಮಾ ಟ್ರೇಲರ್
418 Movie Poster
ಮದನ್​ ಕುಮಾರ್​
|

Updated on: Oct 05, 2026 | 4:08 PM

Share

ಭಾರಿ ಕುತೂಹಲ ಮೂಡಿಸಿರುವ ‘418’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’ ಈ ಸಿನಿಮಾವನ್ನು ನಿರ್ಮಿಸಿದೆ. ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ‘418’ ಹಾರರ್ ಸಿನಿಮಾ ಬಿಡುಗಡೆ ಸಜ್ಜಾಗಿದೆ. ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಹೊಸ ನಿರ್ದೇಶಕ ಕೀರ್ತನ್ ನಾಡಗೌಡ ಅವರು ಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ.

‘418’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್ ಅವರು ಬಂಡವಾಳ ಹೂಡಿರುವ ಈ ಹಾರರ್-ಥ್ರಿಲ್ಲರ್ ಸಿನಿಮಾದಲ್ಲಿ ಕನ್ನಡದ ನಟಿ ಚೈತ್ರಾ ಆಚಾರ್ ಅವರು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಸೂರ್ಯ ರಾಜ್, ಚರಣ್ ಲಕ್ಕರಾಜು, ಪ್ರೀತಿ ಪಗಡಾಲ ಹಾಗೂ ಶಶಾಂಕ್ ಪಾಟೀಲ್ ಕೂಡ ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹೇಗಿದೆ ‘418’ ಟ್ರೇಲರ್?

‘ಆ ಮನೆಯೊಳಗೆ ಒಂದು ಹಕ್ಕಿಯೂ ಕಾಲಿಟ್ಟಿಲ್ಲ’ ಎಂಬ ಸಂಭಾಷಣೆಯೊಂದಿಗೆ ಟ್ರೇಲರ್ ಶುರುವಾಗಿದೆ. ಆರಂಭದಲ್ಲೇ ಯಾವುದೋ ಅದೃಶ್ಯ ಶಕ್ತಿಯ ಉಪಸ್ಥಿತಿಯ ಸುಳಿವು ನೀಡುತ್ತದೆ. ವಾಸ್ತವ ಮತ್ತು ಭ್ರಮೆಗಳ ನಡುವೆ ಸಿಲುಕಿ ಒದ್ದಾಡುವ ವಿವೇಕ್ ಎಂಬ ಯುವಕನ ಸುತ್ತ ಕಥೆಯ ಎಳೆ ತೆರೆದುಕೊಳ್ಳುತ್ತದೆ. ಸ್ಥಳೀಯರ ಪ್ರಬಲ ವಿರೋಧದ ನಡುವೆಯೂ ಬರೋಬ್ಬರಿ 15 ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಕಟ್ಟಡವನ್ನು ಮರುಪ್ರವೇಶಿಸಿದಾಗ ನಿಗೂಢತೆ ಇನ್ನಷ್ಟು ಗಾಢವಾಗುತ್ತದೆ.

ಆ ಕಟ್ಟಡದ ‘ರೂಮ್ ನಂ. 418’ ಬಗ್ಗೆ ಹಲವು ಕಥೆಗಳಿವೆ. ಅದರಲ್ಲಿ ಅಡಗಿಸಿಕೊಂಡಿರುವ ಭಯಾನಕ ರಹಸ್ಯವೇನು ಎಂಬ ಕುತೂಹಲದ ನಡುವೆ, ದೇವಿಕಾ ಪಾತ್ರದ ಆಗಮನವಾಗುತ್ತಿದ್ದಂತೆ ನೈಜ ಹಾರರ್ ಅನುಭವ ಶುರುವಾಗುತ್ತದೆ. ಮೊದಲಿಗೆ ವಾಸ್ತವ ಮತ್ತು ಕಲ್ಪನೆಗಳ ನಡುವಿನ ಸೈಕಲಾಜಿಕಲ್ ಥ್ರಿಲ್ಲರ್‌ನಂತೆ ಭಾಸವಾದರೆ, ನಂತರ ಹಾರರ್ ಅಂಶಗಳ ಭಯಾನಕ ದರ್ಶನ ಆಗುತ್ತದೆ.

ಇದನ್ನೂ ಓದಿ: ಪ್ರಶಾಂತ್ ನೀಲ್ ಹಾರರ್ ಸಿನಿಮಾಗೆ ಸೆನ್ಸಾರ್ ಕಿರಿಕ್? ಭಯಾನಕವಾಗಿದೆ ‘418’ ಸಿನಿಮಾ?

ನಿರ್ದೇಶಕ ಕೀರ್ತನ್ ನಾಡಗೌಡ ಅವರು ಪ್ರತಿಯೊಂದು ಫ್ರೇಮ್‌ನಲ್ಲೂ ಪ್ರೇಕ್ಷಕರ ಎದೆಬಡಿತ ಹೆಚ್ಚಿಸಲಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಚೈತ್ರಾ ಆಚಾರ್ ಅವರು ನಿಭಾಯಿಸಿರುವ ಪಾತ್ರದ ಹಿನ್ನೆಲೆ ಏನು ಎಂಬ ಕುತೂಹಲ ಮೂಡಿದೆ. ದಿನೇಶ್ ದಿವಾಕರ್ ಅವರು ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ವೆಂಕಿ ಜಿಜಿ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್
ಹುಬ್ಬಳ್ಳಿಯ ಜೈನ ಮಂದಿರದಲ್ಲಿ ದರೋಡೆ: ಮುಸುಕುಧಾರಿಗಳಿಂದ ಮೂರ್ತಿ ಧ್ವಂಸ!
ಹುಬ್ಬಳ್ಳಿಯ ಜೈನ ಮಂದಿರದಲ್ಲಿ ದರೋಡೆ: ಮುಸುಕುಧಾರಿಗಳಿಂದ ಮೂರ್ತಿ ಧ್ವಂಸ!
ಸಿಎಂ ನಿವಾಸದ ಬಳಿ ಪೊಲೀಸರ ಮೇಲೆಯೇ ಶಾಸಕ ಕೊತ್ತೂರು ಮಂಜುನಾಥ್ ಗರಂ
ಸಿಎಂ ನಿವಾಸದ ಬಳಿ ಪೊಲೀಸರ ಮೇಲೆಯೇ ಶಾಸಕ ಕೊತ್ತೂರು ಮಂಜುನಾಥ್ ಗರಂ
ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಫುಲ್‌ ಟ್ರಾಫಿಕ್ ಜಾಮ್!
ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಫುಲ್‌ ಟ್ರಾಫಿಕ್ ಜಾಮ್!
10 ಕೆಜಿ ತೂಕದ ಪೇಟ, ಮೋಸಂಬಿ ಹಾರ: ಅರಮನೆಗೆ ಅಭಿಮನ್ಯು ಗ್ರ್ಯಾಂಡ್​​ ಎಂಟ್ರಿ
10 ಕೆಜಿ ತೂಕದ ಪೇಟ, ಮೋಸಂಬಿ ಹಾರ: ಅರಮನೆಗೆ ಅಭಿಮನ್ಯು ಗ್ರ್ಯಾಂಡ್​​ ಎಂಟ್ರಿ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು