Taapsee Pannu: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ; ಇರ್ಫಾನ್​ ಖಾನ್-ತಾಪ್ಸಿ ಪನ್ನು​ ಅತ್ಯುತ್ತಮ ನಟ-ನಟಿ!

66th Filmfare Awards: ಸಿನಿಮಾ ಜಗತ್ತಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ‘ಫಿಲ್ಮ್​ ಫೇರ್​ ಅವಾರ್ಡ್ಸ್​​’ ಘೋಷಣೆ ಆಗಿದೆ. ಕಳೆದ ವರ್ಷ ನಿಧನರಾದ ನಟ ಇರ್ಫಾನ್​ ಖಾನ್​ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ.

Taapsee Pannu: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ; ಇರ್ಫಾನ್​ ಖಾನ್-ತಾಪ್ಸಿ ಪನ್ನು​ ಅತ್ಯುತ್ತಮ ನಟ-ನಟಿ!
ತಾಪ್ಸಿ ಪನ್ನು​ - ಇರ್ಫಾನ್​ ಖಾನ್
Follow us
|

Updated on:Mar 28, 2021 | 11:03 AM

66ನೇ ಫಿಲ್ಮ್​ ಫೇರ್​ ಪ್ರಶಸ್ತಿ ಪ್ರಕಟ ಆಗಿದೆ. ಮಾ.27ರ ಶನಿವಾರ ರಾತ್ರಿ ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ‘ತಪ್ಪಡ್​’ ಸಿನಿಮಾದಲ್ಲಿನ ನಟನೆಗಾಗಿ ತಾಪ್ಸೀ ಪನ್ನು ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಅಂಗ್ರೇಜಿ ಮೀಡಿಯಂ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಇರ್ಫಾನ್​ ಖಾನ್​ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಇರ್ಫಾನ್​ ಖಾನ್​ ಅವರು 2020ರ ಏಪ್ರಿಲ್​ 29ರಂದು ನಿಧನರಾದರು. ಮರಣೋತ್ತರವಾಗಿ ಅವರಿಗೆ ಈಗ ಅತ್ಯುತ್ತಮ ನಟ ಫಿಲ್ಮ್​ ಫೇರ್​ ಪ್ರಶಸ್ತಿ ಸಿಕ್ಕಿದೆ. ಅಲ್ಲದೆ, 2021ನೇ ಸಾಲಿನ ಜೀವಮಾನ ಸಾಧಕ ಪ್ರಶಸ್ತಿ ಕೂಡ ಇರ್ಫಾನ್​ ಖಾನ್​ ಅವರಿಗೆ ಸಿಕ್ಕಿದೆ. ಇದು ಅವರ ಅಭಿಮಾನಿಗಳ ಸಂತಸಕ್ಕೆ ಕಾರಣ ಆಗಿದೆ.

ತಾಪ್ಸಿ ಪನ್ನು ನಟನೆಯ ತಪ್ಪಡ್​ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಹಾಗೂ ಅತ್ಯುತ್ತಮ ಕಥೆ ಪ್ರಶಸ್ತಿಗಳು ಕೂಡ ಒಲಿದು ಬಂದಿವೆ. ವಿಮರ್ಶಕರ ಆಯ್ಕೆ ವಿಭಾಗದಲ್ಲಿ ಅಮಿತಾಭ್​ ಬಚ್ಚನ್​ ಅತ್ಯುತ್ತಮ ನಟ (ಗುಲಾಬೋ ಸಿತಾಬೋ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಸರ್’​ ಸಿನಿಮಾದಲ್ಲಿನ ನಟನೆಗಾಗಿ ತಿಲೋತ್ತಮಾ ಅವರು ಅತ್ಯುತ್ತಮ ನಟಿ ಎನಿಸಿಕೊಂಡಿದ್ದಾರೆ. ವಿಮರ್ಶಕರ ಆಯ್ಕೆಯ ಅತ್ಯುತ್ತಮ ಸಿನಿಮಾ ಮನ್ನಣೆಗೆ ‘ಈಬ್​ ಅಲೆ ಊ’ ಚಿತ್ರ ಪಾತ್ರವಾಗಿದೆ. ದೆಹಲಿಯಲ್ಲಿ ಮಂಗಗಳ ಕಾಟ ತಪ್ಪಿಸಲು ಹೆಣಗಾಡುವ ವ್ಯವಸ್ಥೆಯ ಕಥೆಯನ್ನು ಈ ಸಿನಿಮಾ ಹೊಂದಿದೆ.

ಇತ್ತೀಚೆಗೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳು ಘೋಷಣೆ ಆಗಿದ್ದವು. ಅದರಲ್ಲಿ ನಟಿ ಕಂಗನಾ ರಣಾವತ್​ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದರು. ಸೈದ್ಧಾಂತಿಕವಾಗಿ ಪ್ರತಿ ಹೆಜ್ಜೆಯಲ್ಲೂ ಅವರನ್ನು ವಿರೋಧಿಸುತ್ತ ಬಂದಿರುವ ತಾಪ್ಸೀ ಪನ್ನು ಅವರಿಗೆ ಈಗ ಫಿಲ್ಮ್​ ಫೇರ್​ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿರುವುದು ವಿಶೇಷ. ಪ್ರಶಸ್ತಿ ಪಡೆದ ಎಲ್ಲರಿಗೂ ಸೋಶಿಯಲ್​ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ಅನುಭವ್​ ಸಿನ್ಹಾ ನಿರ್ದೇಶನದ ತಪ್ಪಡ್​ ಚಿತ್ರ ಮೂರು ಪ್ರಶಸ್ತಿಗಳನ್ನು ಪಡೆಯುವ ಮೂಲಕ ಈ ಬಾರಿಯ ಫಿಲ್ಮ್​ಫೇರ್​ ಪಟ್ಟಿಯಲ್ಲಿ ಎಲ್ಲರ ಗಮನ ಸೆಳೆದಿದೆ. ಮಹಿಳೆಯರ ಮೇಲಾಗುವ ಕೌಟುಂಬಿಕ ದೌರ್ಜನ್ಯದ ವಸ್ತುವಿಷಯವನ್ನೇ ಇಟ್ಟುಕೊಂಡು ನಿರ್ದೇಶಕ ಅನುಭವ್​ ಸಿನ್ಹಾ ಅವರು ತುಂಬ ಸೂಕ್ಷ್ಮವಾಗಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದರು. ಬಾಕ್ಸ್​ ಆಫೀಸ್​ನಲ್ಲಿ ತಪ್ಪಡ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

Published On - 10:57 am, Sun, 28 March 21

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್