68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ; ಅವಾರ್ಡ್​​ ಸ್ವೀಕರಿಸಿದ ಕನ್ನಡಿಗರು ಇವರೇ ನೋಡಿ

National Film Awards 2022: ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು.

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ; ಅವಾರ್ಡ್​​ ಸ್ವೀಕರಿಸಿದ ಕನ್ನಡಿಗರು ಇವರೇ ನೋಡಿ
TV9kannada Web Team

| Edited By: Rajesh Duggumane

Sep 30, 2022 | 6:28 PM

ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ (National Award) ಬಗ್ಗೆ ಘೋಷಣೆ ಮಾಡಲಾಗಿತ್ತು. ಇಂದು (ಸೆಪ್ಟೆಂಬರ್ 30) ದೆಹಲಿಯ ವಿಗ್ಯಾನ್​ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಶಿಷ್ಟ ಕಥಾಹಂದರ ಹೊಂದಿರುವ ಕನ್ನಡದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈ ಸಿನಿಮಾಗಳಿಗೆ ಇಂದು ಪ್ರಶಸ್ತಿ ನೀಡಲಾಗಿದೆ.

ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು. ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ದರು. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಘೋಷಿಸಲಾಗಿತ್ತು. ಅವರಿಗೆ ಇಂದು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: Dollu Movie: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಡೊಳ್ಳು’ ಚಿತ್ರ ವೀಕ್ಷಿಸಿ, ಮೆಚ್ಚುಗೆ ಸೂಚಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:

ಅತ್ಯುತ್ತಮ ನಟ: ಅಜಯ್​ ದೇವಗನ್​ ಮತ್ತು ಸೂರ್ಯ

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್​ ಕೆ.ಆರ್​.

ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್​, ಸುಧಾ ಕೊಂಗರು (ಸೂರರೈ ಪೋಟ್ರು)

ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್​ ದೇಶಪಾಂಡೆ (ಮಿ ವಸಂತ್​ ರಾವ್​)

ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

ಇದನ್ನೂ ಓದಿ

ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada