ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ (National Award) ಬಗ್ಗೆ ಘೋಷಣೆ ಮಾಡಲಾಗಿತ್ತು. ಇಂದು (ಸೆಪ್ಟೆಂಬರ್ 30) ದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಶಿಷ್ಟ ಕಥಾಹಂದರ ಹೊಂದಿರುವ ಕನ್ನಡದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್ ಕುಮಾರ್’ ಚಿತ್ರಕ್ಕೆ ಈ ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈ ಸಿನಿಮಾಗಳಿಗೆ ಇಂದು ಪ್ರಶಸ್ತಿ ನೀಡಲಾಗಿದೆ.
ಅಜಯ್ ದೇವಗನ್ (ತಾನಾಜಿ: ದಿ ಅನ್ಸಂಗ್ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು. ‘ಅಯ್ಯಪ್ಪನುಮ್ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ದರು. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಘೋಷಿಸಲಾಗಿತ್ತು. ಅವರಿಗೆ ಇಂದು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
?LIVE Now?
68th #NationalFilmAwards Ceremony
?Vigyan Bhawan, New Delhi
Watch on #PIB‘s?
Facebook: https://t.co/ykJcYlvi5b
YouTube: https://t.co/ECvRpuaH1Shttps://t.co/9hr1R2B2sP— PIB India (@PIB_India) September 30, 2022
ಇದನ್ನೂ ಓದಿ: Dollu Movie: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಡೊಳ್ಳು’ ಚಿತ್ರ ವೀಕ್ಷಿಸಿ, ಮೆಚ್ಚುಗೆ ಸೂಚಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:
ಅತ್ಯುತ್ತಮ ನಟ: ಅಜಯ್ ದೇವಗನ್ ಮತ್ತು ಸೂರ್ಯ
ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ
ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು
ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ
ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್ ಕೆ.ಆರ್.
ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ
ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ
ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್, ಸುಧಾ ಕೊಂಗರು (ಸೂರರೈ ಪೋಟ್ರು)
ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)
ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್ ದೇಶಪಾಂಡೆ (ಮಿ ವಸಂತ್ ರಾವ್)
ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)
ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)
ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ
Published On - 6:27 pm, Fri, 30 September 22