
71ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯ ವಿಜ್ಞಾನ್ ಭವನ್ನಲ್ಲಿ ಇಂದು (ಸೆಪ್ಟೆಂಬರ್ 23) ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ನ ನೀಡಲಿದ್ದಾರೆ. ಸಂಜೆ 4 ಗಂಟಗೆ ಕಾರ್ಯಕ್ರಮ ಆರಂಭ ಆಗಲಿದೆ. ಶಾರುಖ್ ಖಾನ್ ಅವರು ಇದೇ ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿ ಪಡೆಯಲಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.
ಶಾರುಖ್ ಖಾನ್ ಹಾಗೂ ವಿಕ್ರಾಂತ್ ಮಾಸಿ ಅವರಿಗೆ ಈ ಬಾರಿ ಅತ್ಯುತ್ತಮ ನಟ ಅವಾರ್ಡ್ ಸಿಕ್ಕಿದೆ. ಶಾರುಖ್ ಖಾನ್ ಅವರು ‘ಜವಾನ್’ ಸಿನಿಮಾಗಾಗಿ, ವಿಕ್ರಾಂತ್ ಅವರು ‘12th ಫೇಲ್’ ಚಿತ್ರದ ನಟನೆಗೆ ಈ ಅವಾರ್ಡ್ ಪಡೆದಿದ್ದಾರೆ. ರಾಣಿ ಮುಖರ್ಜಿ ಅವರು ‘Mrs ಚಟರ್ಜಿ vs ನಾರ್ವೇ’ ಸಿನಿಮಾದ ನಟನೆಗೆ ಈ ಅವಾರ್ಡ್ ಪಡೆದರು.
ಮೋಹನ್ ಲಾಲ್ ಅವರು ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ನ ಪಡೆದಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಅವಾರ್ಡ್ ನೀಡಲಾಗುತ್ತಿದೆ. ಅವರು ಚಿತ್ರರಂಗದಲ್ಲಿ ನಾಲ್ಕು ದಶಕಗಳಿಗೂ ಅಧಿಕ ಕಾಲದಿಂದ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಾರ್ಡ್ ಘೋಷಣೆ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.