ಕೃಷ್ಣನ ಅವತಾರದಲ್ಲಿರುವ ಈ ಬಾಲಕ ಈಗ ಪ್ಯಾನ್ ಇಂಡಿಯಾ ಸ್ಟಾರ್..

ಈ ಹೀರೋ ದೇಶ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಹೀರೋನ ಸಿನಿಮಾಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಾರೆ.

ಕೃಷ್ಣನ ಅವತಾರದಲ್ಲಿರುವ ಈ ಬಾಲಕ ಈಗ ಪ್ಯಾನ್ ಇಂಡಿಯಾ ಸ್ಟಾರ್..
ಸ್ಟಾರ್ ಹೀರೋನ ಬಾಲ್ಯದ ಫೋಟೋ

Updated on: Jun 19, 2023 | 10:16 AM

ಇತ್ತೀಚೆಗೆ ಸ್ಟಾರ್ ಹೀರೋ-ಹೀರೋಯಿನ್​ಗಳ ಬಾಲ್ಯದ ಫೋಟೋಗಳು ವೈರಲ್ ಆಗುತ್ತಿವೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಮೇಲಿರುವ ಫೋಟೋದಲ್ಲಿ ಇರುವ ಈ ಬಾಲಕ ಈಗ ಸೌತ್ ಇಂಡಸ್ಟ್ರಿಯ (South Industry) ಸ್ಟಾರ್ ಹೀರೋ. ತಮಿಳು ಸಿನಿಮಾಗಳಲ್ಲಿ ನಟಿಸಿದರೂ ದೇಶ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಹೀರೋನ ಸಿನಿಮಾಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಾರೆ. ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ನಾಯಕನಾಗಿ ಮುಂದುವರಿದಿದ್ದಾರೆ. 48ರ ಹರೆಯದಲ್ಲೂ 27ರ ಹರೆಯದ ಯುವಕನಾಗಿ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಬೇರಾರು ಅಲ್ಲ ದಳಪತಿ ವಿಜಯ್ (Thalapathy Vijay). ಕಾಲಿವುಡ್​​ನಲ್ಲಿ ಟಾಪ್ ಹೀರೋ. ಅವರ ಬಾಲ್ಯದ ಫೋಟೋ ವೈರಲ್ ಆಗಿದೆ.

ವಿಜಯ್ ಜೂನ್ 22, 1974ರಂದು ಜನಿಸಿದರು. ಇನ್ನು ಕೆಲವೇ ದಿನಗಳಲ್ಲಿ ಅವರು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ವಿಜಯ್ ತಂದೆ ಎಸ್.ಎ. ಚಂದ್ರಶೇಖರ್, ತಾಯಿ ಶೋಭಾ. ಇಬ್ಬರಿಗೂ ಚಿತ್ರರಂಗದ ಹಿನ್ನೆಲೆ ಇದೆ. 90ರ ದಶಕದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿ ವಿಜಯ್ ಗಮನ ಸೆಳೆದರು. ಈಗ ಅವರ ಬಾಲ್ಯದ ಫೋಟೋ ವೈರಲ್ ಆಗಿವೆ.

ತಮಿಳಿನಲ್ಲಿ ವಿಜಯ್ ಅಭಿನಯದ ಚಿತ್ರಗಳು ತೆಲುಗಿನಲ್ಲೂ ಡಬ್ ಆಗಿ ಸೂಪರ್ ಹಿಟ್ ಆದವು. ತೆಲುಗಿನಲ್ಲೂ ಅವರಿಗೆ ಒಳ್ಳೆಯ ಫ್ಯಾನ್ ಫಾಲೋಯಿಂಗ್ ಇದೆ. ಕರ್ನಾಟಕದಲ್ಲೂ ವಿಜಯ್ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ವಾರಿಸು’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ‘ಲಿಯೋ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ನಿರ್ದೇಶಕ ಲೊಕೇಶ್ ಕನಗರಾಜ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಸುಮಾರು 17 ವರ್ಷಗಳ ನಂತರ ತ್ರಿಷಾ ಮತ್ತು ವಿಜಯ್ ಈ ಚಿತ್ರಕ್ಕಾಗಿ ಜೊತೆಗಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ಖಚಿತ? 234 ವಿಧಾನಸಭಾ ಕ್ಷೇತ್ರಗಳ ಗುರಿ ಇಟ್ಟುಕೊಂಡ ನಟ

ವಿಜಯ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಜೋರಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹತ್ತನೇ ತರಗತಿ ಹಾಗೂ 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರನ್ನು ಸನ್ಮಾನಿಸಲಾಗಿದೆ. ಕ್ಷೇತ್ರಾವಾರು ರೀತಿಯಲ್ಲಿ ಇವರನ್ನು ಸನ್ಮಾನಿಸಲಾಗಿದ್ದು, ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us