‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ

ಹಿಂದಿ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಆದರೂ ಅವರನ್ನು ದಕ್ಷಿಣ ಭಾರತದ ನಟಿ ಎಂದು ಉತ್ತರ ಭಾರತದ ಪ್ರೇಕ್ಷಕರು ಗುರುತಿಸುತ್ತಾರೆ.

‘ನಾನು ಪ್ಯಾನ್​ ಇಂಡಿಯಾ ನಟಿ ಆಗಬೇಕು’; ರಶ್ಮಿಕಾ ಮಂದಣ್ಣ ಹೀಗೆ ಹೇಳಲು ಇದೆ ಒಂದು ಮುಖ್ಯ ಕಾರಣ
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Mar 02, 2022 | 8:54 AM

ಚಿತ್ರರಂಗದ ಮಂದಿಗೆ ಈಗ ‘ಪ್ಯಾನ್​ ಇಂಡಿಯಾ’ (Pan India) ಎಂಬ ಪದ ಸಿಕ್ಕಾಪಟ್ಟೆ ಆಕರ್ಷಕವಾಗಿ ಕಾಣುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳು ಉತ್ತರ ಭಾರತದಲ್ಲಿ ಧೂಳೆಬ್ಬಿಸಲು ಆರಂಭಿಸಿದ ಬಳಿಕ ಈ ಪ್ಯಾನ್​ ಇಂಡಿಯಾ ಎಂಬ ಪದ ಹೆಚ್ಚು ಚಾಲ್ತಿಗೆ ಬಂತು. ದಕ್ಷಿಣ ಭಾರತದ ನಟರಾದ ಯಶ್​, ಪ್ರಭಾಸ್​, ಅಲ್ಲು ಅರ್ಜುನ್​ ಸೇರಿದಂತೆ ಕೆಲವೇ ಕೆಲವರಿಗೆ ಪ್ಯಾನ್​ ಇಂಡಿಯಾ ಸ್ಟಾರ್​ ಎಂಬ ಪಟ್ಟ ಸಿಕ್ಕಿದೆ. ಅದೇ ರೀತಿ ಕೆಲವು ನಟಿಯರಿಗೆ ಈ ಬಗೆಯ ಚಾರ್ಮ್​ ಇದೆ. ಈಗ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಪ್ಯಾನ್​ ಇಂಡಿಯಾ ನಟಿ ಆಗಬೇಕು ಎಂದು ಆಸೆ ವ್ಯಕ್ತಪಡಿಸಿದ್ದಾರೆ. ಹಾಗೆ ನೋಡಿದರೆ, ರಶ್ಮಿಕಾ ಅವರಿಗೆ ಈಗಾಗಲೇ ಅಂಥ ಒಂದು ಸ್ಥಾನ ಸಿಕ್ಕಿದೆ ಎನ್ನಬಹುದು. ಕಳೆದ ವರ್ಷ ಬಿಡುಗಡೆಯಾದ ‘ಪುಷ್ಪ’ ಚಿತ್ರ ಕೂಡ ಪ್ಯಾನ್​ ಇಂಡಿಯಾ ಸಿನಿಮಾ (Pan India Movie) ಎಂದರೆ ತಪ್ಪಿಲ್ಲ. ಯಾಕೆಂದರೆ ಹಿಂದಿಗೆ ಡಬ್​ ಆಗಿದ್ದ ಆ ಚಿತ್ರವು ಬಾಲಿವುಡ್​ ಸಿನಿಮಾಗಳಿಗೆ ಪೈಪೋಟಿ ನೀಡಿ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿತು. ‘ಪುಷ್ಪ’ ಚಿತ್ರದ ಗೆಲುವಿನಿಂದಾಗಿ ಉತ್ತರ ಭಾರತದಲ್ಲಿ ರಶ್ಮಿಕಾ ಅವರ ಖ್ಯಾತಿ ಹೆಚ್ಚಿದೆ.

ರಶ್ಮಿಕಾ ಮಂದಣ್ಣ ಅವರು ಮೊದಲು ವೃತ್ತಿ ಜೀವನ ಆರಂಭಿಸಿದ್ದು ಕನ್ನಡದಿಂದ. ರಕ್ಷಿತ್​ ಶೆಟ್ಟಿ ನಿರ್ದೇಶನದ ‘ಕಿರಿಕ್​ ಪಾರ್ಟಿ’ ಚಿತ್ರದಿಂದ ರಶ್ಮಿಕಾ ಅವರ ಜೀವನ ಬದಲಾಯಿತು. ಬಳಿಕ ಅವರು ಟಾಲಿವುಡ್​ಗೆ ಕಾಲಿಟ್ಟು ಬ್ಯಾಕ್​ ಟು ಬ್ಯಾಕ್​ ಹಿಟ್​ ಸಿನಿಮಾಗಳನ್ನು ನೀಡಿದರು. ಈಗ ಹಿಂದಿ ಚಿತ್ರರಂಗಕ್ಕೂ ಅವರು ಎಂಟ್ರಿ ನೀಡಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’, ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ವಿಷನ್​ ಮಜ್ನು’ ರೀತಿಯ ಬಹುನಿರೀಕ್ಷಿತ ಚಿತ್ರಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ.

ಹಿಂದಿ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಆದರೂ ಅವರನ್ನು ದಕ್ಷಿಣ ಭಾರತದ ನಟಿ ಎಂದು ಉತ್ತರ ಭಾರತದ ಪ್ರೇಕ್ಷಕರು ಗುರುತಿಸುತ್ತಾರೆ. ಆದರೆ ಆ ರೀತಿ ಕರೆಸಿಕೊಳ್ಳುವುದು ರಶ್ಮಿಕಾ ಅವರಿಗೆ ಇಷ್ಟ ಇಲ್ಲ. ಉತ್ತರ-ದಕ್ಷಿಣ ಎನ್ನುವ ಬದಲು ತಮ್ಮನ್ನು ಓರ್ವ ಪ್ಯಾನ್​ ಇಂಡಿಯಾ ನಟಿ ಎನ್ನಬೇಕು ಎಂಬುದು ಅವರ ಆಸೆ. ಡೆಕನ್​ ಕ್ರೋನಿಕಲ್​ಗೆ ನೀಡಿದ ಸಂದರ್ಶನದಲ್ಲಿ ರಶ್ಮಿಕಾ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಹಿಂದಿ ಚಿತ್ರದಲ್ಲಿ ಅವಕಾಶ ಸಿಗುತ್ತಿರುವುದರ ಬಗ್ಗೆ ರಶ್ಮಿಕಾ ಅವರಿಗೆ ಖುಷಿ ಇದೆ. ಅನೇಕ ನಟಿಯರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿದ ಬಳಿಕ ಬಾಲಿವುಡ್​ಗೆ ಕಾಲಿಟ್ಟ ಉದಾಹರಣೆ ಸಾಕಷ್ಟು ಇದೆ. ಆದರೆ ಹಿಂದಿಗೆ ಹೋಗಿ ಯಶಸ್ಸು ಪಡೆದವರ ಸಂಖ್ಯೆ ಕಡಿಮೆ. ‘ಬೇರೆ ಎಲ್ಲ ಭಾಷೆಯ ಚಿತ್ರರಂಗದ ರೀತಿಯೇ ಬಾಲಿವುಡ್​ ಕೂಡ ಇದೆ. ಪರಿಣಾಮಕಾರಿ ಆದಂತಹ ಪಾತ್ರಗಳನ್ನು ಮಾಡಬೇಕು ಎಂದುಕೊಂಡಿದ್ದೇನೆ. ಭಾಷೆ ಎಂಬುದು ನನಗೆ ಯಾವತ್ತೂ ಅಡ್ಡಿ ಆಗಿಲ್ಲ. ಯಾಕೆಂದರೆ ಬೇರೆ ಬೇರೆ ಭಾಷೆಯಲ್ಲಿ ವಿಭಿನ್ನ ಪಾತ್ರಗಳನ್ನು ಮಾಡುವುದನ್ನು ನಾನು ಎಂಜಾಯ್​ ಮಾಡಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

‘ಹೈದರಾಬಾದ್​ನಲ್ಲಿ ಇದ್ದಾಗ ತೆಲುಗು ಮಾತನಾಡುತ್ತೇನೆ. ಮರುದಿನ ಕರ್ನಾಟಕಕ್ಕೆ ಬಂದರೆ ಕನ್ನಡದಲ್ಲಿ ಮಾತನಾಡುತ್ತೇನೆ. ಮುಂಬೈಗೆ ಬಂದರೆ ಹಿಂದಿ. ಸ್ಥಳೀಯ ಜನರ ಬೆಂಬಲದಿಂದ ಇದೆಲ್ಲ ಸಾಧ್ಯವಾಗುತ್ತಿದೆ. ಹಿಂದಿ ಸಿನಿಮಾಗಳಿಗೆ ನಾನೇ ಡಬ್​ ಮಾಡಬೇಕು ಎಂದುಕೊಂಡಿದ್ದೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಅವರು ನಟಿಸಿರುವ ತೆಲುಗಿನ ‘ಆಡುವಾಳ್ಳು ಮೀಕು ಜೋಹಾರ್ಲು’ ಸಿನಿಮಾ ಮಾ.4ರಂದು ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ:

ರಶ್ಮಿಕಾ ಎಕ್ಸ್​ಪ್ರೆಷನ್​ ಕ್ವೀನ್​ ಎನ್ನಲು ಇದಕ್ಕಿಂತ ಸಾಕ್ಷಿ ಬೇಕಿಲ್ಲ

‘ಮದುವೆ ಆಗಲು ನಾನಿನ್ನೂ ಚಿಕ್ಕವಳು’: ಪ್ರೀತಿ-ಶಾದಿ ಬಗ್ಗೆ ವಿವರವಾಗಿ ಮಾತಾಡಿದ ರಶ್ಮಿಕಾ ಮಂದಣ್ಣ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ