AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ ಎಂದ ರಶ್ಮಿಕಾ ಮಂದಣ್ಣ

ಚಿತ್ರದ ನಾಯಕ ಮದುವೆ ಆಗೋಕೆ ಪ್ರಯತ್ನಿಸುತ್ತಿರುತ್ತಾನೆ. ಆದರೆ, ಅದು ಸಾಧ್ಯವಾಗುತ್ತಿರುವುದಿಲ್ಲ. ಇಡೀ ಸಿನಿಮಾದಲ್ಲಿ ಈ ಡ್ರಾಮಾ ಹೈಲೈಟ್​ ಆಗುವ ಸಾಧ್ಯತೆ ಇದೆ.

Rashmika Mandanna: ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ ಎಂದ ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Feb 11, 2022 | 2:52 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಚಿತ್ರರಂಗದಲ್ಲಿ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಸಂಭಾವನೆ ಬಾಚಿಕೊಳ್ಳುತ್ತಾರೆ. ಈಗ ರಶ್ಮಿಕಾ ಅವರು ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಟೀಸರ್​ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ರಶ್ಮಿಕಾ ಅವರ ಪಾತ್ರ ನೋಡಿ ಎಲ್ಲರೂ ಖುಷಿಯಾಗಿದ್ದಾರೆ. ಚಿತ್ರರಂಗದಲ್ಲಿ ಮೊದಲಿನ ಕಳೆ ನಿಧಾನವಾಗಿ ಮರಳುತ್ತಿದೆ. ದೊಡ್ಡ ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ರಶ್ಮಿಕಾ ಮಂದಣ್ಣ ನಟನೆಯ ಹೊಸ ಸಿನಿಮಾ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ (Aadavaallu Meeku Joharlu Movie) ರಿಲೀಸ್​ಗೆ ರೆಡಿ ಆಗಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು’ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ. ಈ ಚಿತ್ರದಲ್ಲಿ ರಶ್ಮಿಕಾ, ‘ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ’ ಎನ್ನುವ ಡೈಲಾಗ್​ ಬಳಕೆ ಮಾಡಿದ್ದರು. ಈ ಡೈಲಾಗ್​ಅನ್ನು ಅಭಿಮಾನಿಗಳು ರಶ್ಮಿಕಾಗೆ ಹೇಳುತ್ತಿದ್ದಾರೆ. ನಿಮ್ಮನ್ನು ಮದುವೆ ಆಗುವ ಹುಡುಗ ನಿಜಕ್ಕೂ ಲಕ್ಕಿ ಎಂದಿದ್ದಾರೆ.

ಚಿತ್ರದ ನಾಯಕ ಮದುವೆ ಆಗೋಕೆ ಪ್ರಯತ್ನಿಸುತ್ತಿರುತ್ತಾನೆ. ಆದರೆ, ಅದು ಸಾಧ್ಯವಾಗುತ್ತಿರುವುದಿಲ್ಲ. ಇಡೀ ಸಿನಿಮಾದಲ್ಲಿ ಈ ಡ್ರಾಮಾ ಹೈಲೈಟ್​ ಆಗುವ ಸಾಧ್ಯತೆ ಇದೆ. 2020ರ ಅಕ್ಟೋಬರ್ ತಿಂಗಳಲ್ಲಿ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರ ಘೋಷಣೆ ಆಗಿತ್ತು. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ರಶ್ಮಿಕಾ, ಶರ್ವಾನಂದ್ ನಟನೆಯ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಇದಾಗ್ಯೂ ಚಿತ್ರದ ಒಟಿಟಿ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟವಾಗಿದೆ. ಕಂಪ್ಲೀಟ್ ಫ್ಯಾಮಿಲಿ ಎಂಟರ್​ಟೈನರ್ ಆಗಿರುವ ಈ ಚಿತ್ರದ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳನ್ನು ಸೋನಿ ಲಿವ್ ಖರೀದಿಸಿದೆ. ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂಗಳನ್ನು ನೀಡಲಾಗಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಲಹರಿ ಮ್ಯೂಸಿಕ್ ಉತ್ತಮ ಬೆಲೆಗೆ ಖರೀದಿಸಿದೆ. ಶರ್ವಾನಂದ್ ನಟನೆಯ ಚಿತ್ರ ಸ್ಯಾಟಲೈಟ್ ಹಾಗೂ ಒಟಿಟಿಗೆ ಇಷ್ಟು ದೊಡ್ಡ ಮೊತ್ತವನ್ನು ಪಡೆದಿರುವುದು ಇದೇ ಮೊದಲು. ಇದು ಅಭಿಮಾನಿಗಳಿಗೆ ಅಚ್ಚರಿ ತಂದಿರುವುದಲ್ಲದೇ, ಸಖತ್ ಖುಷಿ ನೀಡಿದೆ.

ಇದನ್ನೂ ಓದಿ:  Gehraiyaan Movie Review: ‘ಗೆಹರಾಯಿಯಾ’ ಇದು ಕೇವಲ ಹಸಿಬಿಸಿ ದೃಶ್ಯಗಳ ಕಥೆಯಲ್ಲ..

ರಶ್ಮಿಕಾ ಹೊಸ ಚಿತ್ರದ ಒಟಿಟಿ ಹಾಗೂ ಸ್ಯಾಟಲೈಟ್​​ ಹಕ್ಕುಗಳಿಗೆ ಭರ್ಜರಿ ಆಫರ್; ಮೊತ್ತ ಕೇಳಿ ಹುಬ್ಬೇರಿಸಿದ ಫ್ಯಾನ್ಸ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ