‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಮತ್ತು ಅಮಲಾ ಪೌಲ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇಂದು (ಮಾರ್ಚ್​ 28) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ.

‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ
ಪೃಥ್ವಿರಾಜ್​ ಸುಕುಮಾರನ್​
Follow us
ಮದನ್​ ಕುಮಾರ್​
|

Updated on: Mar 28, 2024 | 3:59 PM

ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್ ಅವರ ಆಡುಜೀವಿತಂ’ ಸಿನಿಮಾ (Aadujeevitham) ಬಿಡುಗಡೆ ಆಗಿದೆ. ಹಲವು ವರ್ಷಗಳ ಶ್ರಮಕ್ಕೆ ಫಲವಾಗಿ ಈಗ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನೈಜ ಘಟನೆ ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ಈ ಸಿನಿಮಾದಲ್ಲಿ ಡಿಫರೆಂಟ್​ ಗೆಟಪ್​ ತಾಳಿದ್ದಾರೆ. ದೇಹದ ತೂಕ ಇಳಿಸಿಕೊಂಡು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ. ಬ್ಲೆಸ್ಸಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಅವರು ಈ ಸಿನಿಮಾಗಾಗಿ ಹತ್ತಾರು ವರ್ಷ ಕಷ್ಟಪಟ್ಟಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಎಕ್ಸ್​ (ಟ್ವಿಟರ್​) ಮೂಲಕ ತಮ್ಮ ವಿಮರ್ಶೆ (Aadujeevitham Twitter Review) ಹಂಚಿಕೊಂಡಿದ್ದಾರೆ.

‘ಪಾಟ್ನಾದಲ್ಲಿ ಆಡುಜೀವಿತಂ ಸಿನಿಮಾವನ್ನು ನೋಡಬೇಕು ಎಂದು ಬುಕಿಂಗ್​ ಆ್ಯಪ್​ ತೆರೆದರೆ ಹೌಸ್​ಫುಲ್​ ತೋರಿಸುತ್ತಿದೆ. ನಾಳೆ ನೋಡುತ್ತೇನೆ. ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಆಲ್​ ದಿ ಬೆಸ್ಟ್​’ ಎಂದು ಪಾಟ್ನಾದಲ್ಲಿನ ಅಭಿಮಾನಿಯೊಬ್ಬರು ಪೋಸ್ಟ್​ ಮಾಡಿದ್ದಾರೆ. ಮಲಯಾಳಂ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಈ ರೀತಿ ರೆನ್ಪಾನ್ಸ್ ಸಿಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಈ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಜೊತೆ ಅಮಲಾ ಪೌಲ್​, ಜಿಮ್ಮಿ ಜೀನ್​ ಲೂಯಿಸ್​, ಕೆ.ಆರ್​. ಗೋಕುಲ್​ ಮುಂತಾದವರು ನಟಿಸಿದ್ದಾರೆ. ‘ಇದು ತುಂಬ ಒಳ್ಳೆಯ ಸಿನಿಮಾ. ಇದಕ್ಕೆ ಖಂಡಿತವಾಗಿಯೂ ಜನರ ಬೆಂಬಲ ಸಿಗಬೇಕು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ‘ಇದು ಸಿನಿಮ್ಯಾಟಿಕ್​ ಮ್ಯಾಜಿಕ್​. ಯಾರೂ ಈ ಚಿತ್ರವನ್ನು ಮಿಸ್​ ಮಾಡಿಕೊಳ್ಳಬೇಡಿ’ ಎಂದು ಕೆಲವು ಪ್ರೇಕ್ಷಕರು ಹೇಳಿದ್ದಾರೆ.

‘ನಿರ್ದೇಶಕ ಬ್ಲೆಸ್ಸಿ ಮತ್ತು ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದಾರೆ. ನಮ್ಮೆಲ್ಲರ ನಿರೀಕ್ಷೆಗೆ ತಮ್ಮಂತೆ ಸಿನಿಮಾ ಮೂಡಿಬಂದಿದೆ’ ಎಂಬ ಮಾತು ಕೂಡ ಪ್ರೇಕ್ಷಕರಿಂದ ಕೇಳಿಬಂದಿದೆ. ‘ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಇಂಥ ಪಾತ್ರವನ್ನು ಪೃಥ್ವಿರಾಜ್​ ಸುಕುಮಾರನ್​ ಅವರು ತುಂಬ ಚೆನ್ನಾಗಿ ನಿಭಾಯಿಸಿದ್ದಾರೆ. ನಜೀಬ್​ ಮೊಹಮ್ಮದ್​ ಎಂಬ ಈ ಪಾತ್ರದಲ್ಲಿ ಅವರು ಜೀವಿಸಿದ್ದಾರೆ’ ಎಂದು ಪ್ರೇಕ್ಷಕರೊಬ್ಬರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

ಇದನ್ನೂ ಓದಿ: ಹೇಗಿದೆ ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಸಿನಿಮಾ? ವಿಮರ್ಶೆ ತಿಳಿಸಿದ ಕಮಲ್ ಹಾಸನ್

ಎಲ್ಲ ಕಡೆಗಳಲ್ಲಿ ಈ ಸಿನಿಮಾಗೆ ಉತ್ತಮ ವಿಮರ್ಶೆ ಸಿಗುತ್ತಿದೆ. ಕೆಲವು ಚಿತ್ರಮಂದಿರಗಳಲ್ಲಿ ಇಂಗ್ಲಿಷ್​ ಸಬ್​ಟೈಟಲ್​ ಇಲ್ಲ ಎಂದು ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಪೃಥ್ವಿರಾಜ್​ ಸುಕುಮಾರನ್​ ಅವರು ಎಂಥ ನಟ ಎಂಬುದು ನಮಗೆಲ್ಲರಿಗೂ ಗೊತ್ತು. ಅವರ ಸಾಮರ್ಥ್ಯವನ್ನು ತೋರಿಸುವ ಇನ್ನೊಂದು ಸಿನಿಮಾ ಆಡುಜೀವಿತಂ. ಈ ಸಿನಿಮಾವನ್ನು ತೆಲುಗಿಗೆ ಡಬ್​ ಮಾಡಿ ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದಗಳು’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ