AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?

ನಟ ಆಮಿರ್ ಖಾನ್ ಅವರು ಈ ಹಿಂದೆ 'ಸತ್ಯಮೇವ್ ಜಯತೇ' ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?
ಆಮಿರ್ ಖಾನ್
ಗಂಗಾಧರ​ ಬ. ಸಾಬೋಜಿ
|

Updated on:Apr 17, 2024 | 9:21 PM

Share

ಲೋಕಸಭೆ ಚುನಾವಣೆ ವೇಳೆ ಬಾಲಿವುಡ್​ನ​ ಮಿಸ್ಟರ್​ ಪರ್ಫೆಕ್ಟ್ ನಟ ಆಮಿರ್ ಖಾನ್ (Aamir Khan)  ಅವರು ಕಾಂಗ್ರೆಸ್ (Congress)​ ವಿರುದ್ಧ ಸಮರಕ್ಕಿಳಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಡೀಪ್‌ ಫೇಕ್ ವಿಡಿಯೋವನ್ನು ಕಾಂಗ್ರೆಸ್​ ಬಳಸಿಕೊಂಡಿದೆ ಎಂದು ಆರೋಪಿಸಿ ಕೇಸ್​ ದಾಖಲಿಸಲಾಗಿದ್ದು, ಎಫ್‌ಐಆರ್ ಕೂಡ ಹಾಕಲಾಗಿದೆ.

ನಟ ಆಮಿರ್ ಖಾನ್ ಅವರು ಈ ಹಿಂದೆ ‘ಸತ್ಯಮೇವ್ ಜಯತೇ’ ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್

ಡೀಪ್‌ ಫೇಕ್ ಮೂಲಕ ಸೃಷ್ಟಿಸಿರುವ ಕಾಂಗ್ರೆಸ್​ ಜಾಹೀರಾತಿನಲ್ಲಿ, ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವ ಬಿಜೆಪಿಯ ಭರವಸೆಯನ್ನು ನಟ ಆಮಿರ್ ಖಾನ್ ಅವರು ಟೀಕಿಸುವುದನ್ನು ಕಾಣಬಹುದಾಗಿದೆ.

ಸದ್ಯ ಈ ಪ್ರಕರಣ ಕುರಿತಾಗಿ ಆಮಿರ್ ಖಾನ್ ಅವರ ವಕ್ತಾರ ಮಾತನಾಡಿದ್ದು, ಆಮಿರ್ ಖಾನ್ ಅವರು ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಅವರು ಟೀಕೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಡೀಪ್‌ಫೇಕ್​ ವಿಡಿಯೋ ಮೂಲಕ ಸುಳ್ಳು ಮತ್ತು ದಾರಿತಪ್ಪಿಸುವ ಕೆಲಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?

ಮುಂಬೈ ಪೊಲೀಸರು, ಸೈಬರ್ ಕ್ರೈಂ ಸೆಲ್ ಸೇರಿದಂತೆ ಕಾನೂನು ಅಧಿಕಾರಿಗಳವರೆಗೂ ಆಮಿರ್ ಖಾನ್ ಅವರ ವಿಚಾರ ತಪುಪಿದೆ. ಈ ಕುರಿತಾಗಿ ಪೊಲೀಸ್​ ಇಲಾಖೆ ಕೂಡ ಕ್ರಮಕ್ಕೆ ಮುಂದಾಗಿದೆ. ಇದೊಂದು ನಕಲಿ ವಿಡಿಯೋ ಮತ್ತು ಸುಳ್ಳು ಮಾಹಿತಿಯಾಗಿದೆ. ಈ ಹಿನ್ನೆಲೆ ಸೈಬರ್ ಕ್ರೈಂ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಈ ವಿಷಯಕ್ಕೆ ಸಂಬಂಧಿಸಿದ ವಿವಿಧ ಅಧಿಕಾರಿಗಳಿಗೆ ಅವರು ವರದಿ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯರು ಕೂಡ ಹೊರಬಂದು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಮತ ಚಲಾಯಿಸಬೇಕು ಎಂಬುವುದು ಆಮಿರ್ ಖಾನ್​ ಅವರು ಬಯಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:19 pm, Wed, 17 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!